





ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 33/11ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮುಕ್ರಂಪಾಡಿ ಫೀಡರ್‌ನಲ್ಲಿ ನ.6 ರಂದು ಪೂರ್ವಾಹ್ನ ಗಂಟೆ 10 ರಿಂದ ಅಪರಾಹ್ನ 5 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.


ಆದುದರಿಂದ, 33/11ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಮುಕ್ರಂಪಾಡಿ ಇಂಡಸ್ಟ್ರಿಯಲ್, ಸಂಪ್ಯ, ಮೊಟ್ಟೆತ್ತಡ್ಕ, ಎನ್‌ಆರ್‌ಸಿಸಿ, ಭಗವತಿ ಗ್ಯಾರೇಜ್, ಮಹಿಳಾ ಕಾಲೇಜು ಮತ್ತು ಅಪೂರ್ವ ಲೇಔಟ್ ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.















