ನ.06-07: ಪರ್ಪುಂಜ ರಾಮಜಾಲು ಶ್ರೀ ರಕ್ತೇಶ್ವರಿ ಶ್ರೀ ಪಂಜುರ್ಲಿ ಪರಿವಾರ ದೈವಗಳ ಶಿಲಾ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭಾ ಕಾರ್ಯಕ್ರಮ

0

ಪುತ್ತೂರು: ರಾಮ ಲಕ್ಷ್ಮಣರು ಅಡ್ಡಾಡಿದ ಪ್ರದೇಶ, ಕೋಟಿ ಚೆನ್ನಯರು ನೆಲೆಯಾಗಿರುವ ಪುಣ್ಯಭೂಮಿ ಎಂದೇ ಪ್ರಸಿದ್ಧಿ ಪಡೆದುಕೊಂಡಿರುವ ಒಳಮೊಗ್ರು ಗ್ರಾಮದ ಪರ್ಪುಂಜ ರಾಮಜಾಲು ಪ್ರದೇಶದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ರಕ್ತೇಶ್ವರಿ ಶ್ರೀ ಪಂಜುರ್ಲಿ ಪರಿವಾರ ದೈವಗಳ ಸಾನಿಧ್ಯದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ಶ್ರೀ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ರಕ್ತೇಶ್ವರಿ ಶ್ರೀ ಪಂಜುರ್ಲಿ ಪರಿವಾರ ದೈವಗಳ ಶಿಲಾ ಪ್ರತಿಷ್ಠಾ ಕಲಶೋತ್ಸವ ನ.6 ಮತ್ತು 7 ರಂದು ನಡೆಯಲಿದೆ.

ನ.6 ರಂದು ಸಂಜೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹ, ಸ್ಥಳ ಶುದ್ಧಿ, ಪ್ರಸಾದ ಶುದ್ಧಿ, ರಾಕ್ಷೆಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾ ಬಲಿ, ನೂತನ ಬಿಂಬ ಜಲಾಧಿವಾಸ ನಡೆದು ಪ್ರಸಾದ ವಿತರಣೆ ಬಳಿಕ ಭಕ್ತಾಧಿಗಳಿಗೆ ಅನ್ನಪ್ರಸಾದ ವಿತರಣೆ ನಡೆಯಲಿದೆ. ನ.7 ರಂದು ಬೆಳಿಗ್ಗೆ 7 ರಿಂದ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ ನಡೆದು 10.04ರಿಂದ 10.58 ರ ಧನು ಲಗ್ನದಲ್ಲಿ ಶ್ರೀ ರಕ್ತೇಶ್ವರಿ ಪರಿವಾರ ದೈವಗಳ ಶಿಲಾ ಪ್ರತಿಷ್ಠೆ ನಡೆದು ಕಲಶಾಭಿಷೇಕ, ತಂಬಿಲ ಸೇವೆ ಬಳಿಕ ಮಹಾಪೂಜೆ ನಡೆದು ಪ್ರಸಾದ ವಿತರಣೆ ನಡೆದು ಭಕ್ತಾಧಿಗಳಿಗೆ ಅನ್ನಪ್ರಸಾದ ವಿತರಣೆ ನಡೆಯಲಿದೆ.


ಈ ಎಲ್ಲಾ ಪುಣ್ಯ ಕಾರ್ಯಕ್ರಮಗಳಲ್ಲಿ ಊರ ಪರವೂರ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸುವಂತೆ ಆಡಳಿತ ಸಮಿತಿಯ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ, ಪ್ರಧಾನ ಕಾರ್ಯದರ್ಶಿ ಹರಿಹರ ಕೋಡಿಬೈಲು, ಕಾರ್ಯಾಧ್ಯಕ್ಷ ಅನಿಲ್ ರೈ ಬಾರಿಕೆ, ಕೋಶಾಧಿಕಾರಿ ಪ್ರಮೀಳಾ ಎಸ್, ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಮಿತಿ ಗೌರವ ಅಧ್ಯಕ್ಷ ಮೋಹನದಾಸ ರೈ ಕುಂಬ್ರ, ಅಧ್ಯಕ್ಷ ಗಣೇಶ್ ಕೋಡಿಬೈಲು, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ಅತಿಥಿ, ಸಂಚಾಲಕ ರತನ್ ರೈ ಕುಂಬ್ರ, ಉಪಾಧ್ಯಕ್ಷ ಶೀನಪ್ಪ ನಾಯ್ಕ ಗುರಿಕುಮೇರು, ಕಾರ್ಯದರ್ಶಿ ಶ್ರೀಮತಿ ಸುರೇಶ್, ಜತೆ ಕಾರ್ಯದರ್ಶಿ ರೇಖಾ ಎಸ್, ಕೋಶಾಧಿಕಾರಿ ರಾಜೇಶ್ ರೈ ಪರ್ಪುಂಜ ಹಾಗೂ ಗೌರವ ಅಧ್ಯಕ್ಷರುಗಳಾದ ನಾರಾಯಣ ರೈ ಬಾರಿಕೆ, ಕೆ.ಸಂಜೀವ ಪೂಜಾರಿ ಕೂರೇಲು, ಪ್ರೇಮ್‌ರಾಜ್ ರೈ ಪರ್ಪುಂಜ, ಚನಿಯಪ್ಪ ನಾಯ್ಕ ಗುರಿಕುಮೇರು ಹಾಗೂ ವಿವಿಧ ಸಮಿತಿಯ ಪದಾಧಿಕಾರಿಗಳು, ಸಂಚಾಲಕರು ಮತ್ತು ಸರ್ವ ಸದಸ್ಯರುಗಳು ಪ್ರಕಟಣೆ ತಿಳಿಸಿದೆ.



ಧಾರ್ಮಿಕ ಸಭಾ ಕಾರ್ಯಕ್ರಮ
ಬ್ರಹ್ಮಕಲಶೋತ್ಸವದ ಅಂಗವಾಗಿ ನ.7 ರಂದು ಬೆಳಿಗ್ಗೆ 11 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ರಾಮಜಾಲು ಶ್ರೀ ಬ್ರಹ್ಮಬೈದೇರ್ಕಳ ಗರಡಿಯ ಆಡಳಿತ ಮೊಕ್ತೇಸರ ಕೆ.ಸಂಜೀವ ಪೂಜಾರಿ ಕೂರೇಲು ಸಭಾಧ್ಯಕ್ಷತೆ ವಹಿಸಲಿದ್ದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೆಮ್ಮಿಂಜೆ ಶ್ರೀ ಲಕ್ಷ್ಮೀಶ ತಂತ್ರಿಯವರು ಮಾರ್ಗದರ್ಶನ ಆಶೀವರ್ಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ತು ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಧಾರ್ಮಿಕ ಮುಖಂಡ ಡಾ.ಎಂ.ಕೆ ಪ್ರಸಾದ್, ಮಾಜಿ ಶಾಸಕ ಸಂಜೀವ ಮಠಂದೂರು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ವಿಜಯ ಸಾಮ್ರಾಟ್ ಸ್ಥಾಪಕ ಅಧ್ಯಕ್ಷ ಸಹಜ್ ರೈ ಬಳಜ್ಜ, ಸ್ಪಂದನಾ ಸೇವಾ ಬಳಗದ ಗೌರವ ಅಧ್ಯಕ್ಷ ವೆಂಕಪ್ಪ ಗೌಡ ಬೊಳ್ಳಾಡಿ, ಅಕ್ಷಯ ಗ್ರೂಪ್ಸ್‌ನ ಮಾಲಕ, ಉದ್ಯಮಿ ಜಯಂತ ನಡುಬೈಲ್, ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ನ್ಯಾ.ಕುಂಬ್ರ ದುರ್ಗಾಪ್ರಸಾದ್ ರೈ, ಕುಂಬ್ರ ಪ್ರಾಥಮಿಕ ಕೃ.ಪ.ಸ.ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಬಿ.ಆರ್‌ರವರುಗಳು ಭಾಗವಹಿಸಲಿದ್ದಾರೆ.


ನ.07 ಶಿಲಾ ಪ್ರತಿಷ್ಠಾ ಕಲಶೋತ್ಸವ
ಬೆಳಿಗ್ಗೆ 10.04 ರಿಂದ 10.58ರ ಧನು ಲಗ್ನದಲ್ಲಿ ಶ್ರೀ ರಕ್ತೇಶ್ವರಿ ಪರಿವಾರ ದೈವಗಳ ಶಿಲಾ ಪ್ರತಿಷ್ಠೆ ನಡೆದು ಕಲಶಾಭಿಷೇಕ ನಡೆಯಲಿದೆ.

LEAVE A REPLY

Please enter your comment!
Please enter your name here