





ಪುತ್ತೂರು: ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವತಿಯಿಂದ “ಸಮಾಜಶಾಸ್ತ್ರ ವಿಚಾರ ವೇದಿಕೆಯ ಉದ್ಘಾಟನೆ ಹಾಗೂ “ಯುವಕರ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸವನ್ನು ಇತ್ತೀಚಿಗೆ ಕಾಲೇಜಿನಲ್ಲಿ ಆಯೋಜಿಸಲಾಯಿತು.



ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರವಿರಾಜ ಎಸ್. ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗಿದ್ದು, ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ನಂದೀಶ್ ವೈ.ಡಿ.ರವರು ಸಮಾಜಶಾಸ್ತ್ರ ವಿಚಾರ ವೇದಿಕೆಯನ್ನು ಉದ್ಘಾಟಿಸಿ ವಿಭಾಗದ ಲಾಂಛನವನ್ನು ಅನಾವರಣಗೊಳಿಸಿ ಉದ್ಘಾಟನಾ ಭಾಷಣ ಮಾಡಿದರು.





ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿದ್ದ ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ದೇವರಾಜ ಆರ್.ರವರು, ತಮ್ಮ ಉಪನ್ಯಾಸದಲ್ಲಿ ಸಾಮಾಜಿಕ ಜಾಲತಾಣಗಳ ಸಕಾರಾತ್ಮಕ ಮತ್ತು ನಕಾರಾತ್ಮಕ ಅಂಶಗಳನ್ನು ವಿಶ್ಲೇಷಿಸಿದರು. ಮಾನಸಿಕ ಒತ್ತಡ ಹಾಗೂ ಸಾಮಾಜಿಕ ಸಂಬಂಧಗಳ ಕ್ಷೀಣಿಸುವಿಕೆ ಮುಂತಾದ ಹಾನಿಕರ ಅಂಶಗಳ ಬಗ್ಗೆ ಎಚ್ಚರಿಕೆ ನೀಡಿದರು. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣವನ್ನು ಸಮತೋಲನದಿಂದ ಹಾಗೂ ಜವಾಬ್ದಾರಿಯುತವಾಗಿ ಬಳಕೆ ಮಾಡಬೇಕು ಎಂದು ಹೇಳಿದರು.
ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ವಿಭಾಗದ ಮುಖ್ಯಸ್ಥ ಮಹೇಶ ಜಿ.ರವರು ಕಾರ್ಯಕ್ರಮಕ್ಕೆ ಸ್ವಾಗತ ಕೋರಿ ಸಂಯೋಜಕರಾಗಿ ಕಾರ್ಯನಿರ್ವಹಿಸಿದರು. ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಕೃಷ್ಣ ಡಿ. ಹಾಗೂ ಅರ್ಥಶಾಸ್ತ್ರ ವಿಭಾಗದ ಡಾ. ತೇಜಸ್ವಿ ಕುಮಾರ್ ಅಕಾಡೆಮಿಕ್ ವೇದಿಕೆಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ, ವೇದಿಕೆಯನ್ನು ಕಲಿಕೆಗೆ ಬಳಸಿಕೊಳ್ಳಲು ಸಲಹೆ ನೀಡಿ, ಶುಭಾಶಯ ಕೋರಿದರು. ಕಾರ್ಯಕ್ರಮದ ನಿರೂಪಣೆಯನ್ನು ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ರಿಕ್ಷಿತ ನಿರ್ವಹಿಸಿದರು. ಜೀವಿತಾ ಮತ್ತು ತಂಡ ಪ್ರಾರ್ಥಿಸಿದರು ಹಾಗೂ ಭವ್ಯಾ ವಂದಿಸಿದರು.








