





ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿರುವ ಯೇಸುರಾಜ್ ಅವರನ್ನು ನೇಮಕ ಮಾಡಲಾಗಿದೆ.


ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿರುವ ಕೆ.ವಿ.ಶ್ರೀನಿವಾಸ ಅವರು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಹಾಗೂ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಕೆ.ವಿ.ಶ್ರೀನಿವಾಸ ಅವರ ಕೋರಿಕೆಯಂತೆ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹುದ್ದೆಯಿಂದ ಬಿಡುಗಡೆಗೊಳಿಸಿ ಅವರ ಸ್ಥಾನಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿರುವ ಯೇಸುರಾಜ್ ಅವರಿಗೆ ಹೆಚ್ಚುವರಿ ಪ್ರಭಾರದಲ್ಲಿರಿಸಿ ದ.ಕ.ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ.














