





ಪುತ್ತೂರು: ರಾಜ್ಯ ಪ್ರಾಚ್ಯವಸ್ತು ಇಲಾಖೆ ವತಿಯಿಂದ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪಾಪೆಮಜಲು ಸರಕಾರಿ ಪ್ರೌಢ ಶಾಲೆಯ 9 ತರಗತಿಯ ವಿದ್ಯಾರ್ಥಿನಿ ವರ್ಷಿಣಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರು ಕೌಡಿಚ್ಚಾರು ನಿವಾಸಿ ಮೋಹನ ಹಾಗೂ ಅನಿತಾ ದಂಪತಿಗಳ ಪುತ್ರಿ.












