





ಪುತ್ತೂರು: ಮಂಗಳೂರು ಓಷ್ಯನ್ ಪರ್ಲ್ ನಲ್ಲಿ ನಡೆದ ಮಂಗಳಾ ಗಂಗೋತ್ರಿ ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ವಿಶೇಷ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಿರ್ಮಾಣವಾಗಲಿರುವ ಯಾತ್ರಿ ನಿವಾಸ ಹಾಗೂ ಅನ್ನ ಛತ್ರದ ಶಿಲಾನ್ಯಾಸ ಕಾರ್ಯಕ್ರಮ ಆಮಂತ್ರಣ ಪತ್ರಿಕೆಯನ್ನು ಸೋಲೂರು ಆರ್ಯ ಈಡಿಗ ಸಂಸ್ಥಾನದ ಗುರುಗಳಾದ ಶ್ರೀ ವಿಖ್ಯಾತನಂದ ಸ್ವಾಮಿಜಿ , ಶಿವಗಿರಿ ಮಠದ ಶ್ರೀ ಜ್ಞಾನತೀರ್ಥ ಸ್ವಾಮೀಜಿ, ಹಾಗೂ ಶ್ರೀ ಸತ್ಯಾನಂದ ಸ್ವಾಮಿ ಉಪಸ್ಥಿತಿಯಲ್ಲಿ ಬಿಡುಗಡೆಗೊಳಿಸಿದರು.


ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ ಸೆಂಟರ್, ಪ್ರಧಾನ ಕಾರ್ಯದರ್ಶಿ ಡಾ| ರಾಜಾರಾಮ್.ಕೆ.ಬಿ, ಉಲ್ಲಾಸ್ ಕೋಟ್ಯಾನ್, ಟ್ರಸ್ಟಿಗಳಾದ ಪ್ರಮಲ್ ಕುಮಾರ್, ನಾರಾಯಣ ಪೂಜಾರಿ, ಡಾ. ಸಂತೋಷ ಬೈರಂಪಳ್ಳಿ , ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷರಾದ ನವೀನ್ ಚಂದ್ರ ಡಿ.ಸುವರ್ಣ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ಅಧ್ಯಯನ ಪೀಠದ ಸಂಚಾಲಕರಾದ ಪಿ.ವಿ.ಮೋಹನ್, ನಂಬಿಯಾರ್, ಶಾಸಕ ಉಮಾನಾಥ ಕೋಟ್ಯಾನ್ ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಶಾಸಕರಾದ ಸುನಿಲ್ ಕುಮಾರ್, ಬೆಳ್ತಂಗಡಿಯ ರಕ್ಷಿತ್ ಶಿವರಾಂ, ವಿಜಯ ಕುಮಾರ್ ಸೊರಕೆ, ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷರಾದ ಸತ್ಯಜೀತ್ ಸುರತ್ಕಲ್, ಜಯವಿಕ್ರಮ್ ಕಲ್ಲಾಪು ಮತ್ತಿತರರ ಉಪಸ್ಥಿತಿಯಲ್ಲಿ ಆಮಂತ್ರಣ ವಿತರಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.















