ನ್ಯಾಯಾಲಯಕ್ಕೆ ನಕಲಿ ದಾಖಲೆ ನೀಡಿ ಆರೋಪಿಗೆ ಜಾಮೀನು:ವಂಚನೆ ಆರೋಪಿಯ ಬಂಧನ

0

ಪುತ್ತೂರು:ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ ಆರೋಪಿಗೆ ಜಾಮೀನು ನೀಡುವಂತೆ ಮಾಡಿ ವಂಚಿಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


ಪಡುವನ್ನೂರು ಗ್ರಾಮದ ಅಬ್ದುಲ್ ಹಾಶೀಮ್ (34ದ.)ಬಂಧಿತ ಆರೋಪಿ ಪುತ್ತೂರು ನಿವಾಸಿಯೊಬ್ಬರ ಮಾಲಿಕತ್ವದಲ್ಲಿರುವ ಜಮೀನಿನ ಆರ್‌ಟಿಸಿಯನ್ನು ತನ್ನ
ಹೆಸರಿನಲ್ಲಿರುವ ಜಮೀನಿನ ಆರ್‌ಟಿಸಿಯೆಂದು ನಂಬಿಸಿ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ದ.ಕ ಜಿಲ್ಲೆ ಮಂಗಳೂರು ನ್ಯಾಯಾಲಯಕ್ಕೆ ನೀಡಿ ಪ್ರಕರಣವೊಂದರ ಆರೋಪಿಗೆ ಜಾಮೀನು ನೀಡುವಂತೆ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಠಾಣೆಯಲ್ಲಿ ಕಲಂ 417, 419, 467, 468, 471 2.2.2 ಪ್ರಕರಣ(ಅ.ಕ್ರ.84/2025)ದ ತನಿಖೆ ನಡೆಸಲಾಗಿ, ಪ್ರಕರಣದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಫಿರ್ಯಾದುದಾರನೆಂದು ಹೇಳಿಕೊಂಡು, ನಕಲಿ ಸಹಿ ಮಾಡಿ ನ್ಯಾಯಾಲಯಕ್ಕೆ ವಂಚಿಸುವ ಉದ್ದೇಶದಿಂದ, ಬೆಲೆಬಾಳುವ ಭದ್ರತಾ ಪತ್ರವನ್ನು ನೀಡಿದ ಆರೋಪಿ ಅಬ್ದುಲ್ ಹಾಶೀಮ್ ಎಂಬಾತನನ್ನು ನ.6ರಂದು ದಸ್ತಗಿರಿ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

LEAVE A REPLY

Please enter your comment!
Please enter your name here