





ಪುತ್ತೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರಕಾರ, ಕರ್ನಾಟಕ ಒಲಿಂಪಿಕ್ ಸಂಸ್ಥೆ, ಮಿನಿ ಕರ್ನಾಟಕ ಒಲಿಂಪಿಕ್ಸ್ ಕ್ರೀಡಾಕೂಟ 2025 ಇವರ ಆತಿಥ್ಯದಲ್ಲಿ ಶ್ರೀ ಕಂಠೀರವ ಕ್ರೀಡಾಂಗಣ ಬೆಂಗಳೂರು ಇಲ್ಲಿ ನಡೆದ ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪ್ರೌಢಶಾಲೆ, ದರ್ಬೆ ಪುತ್ತೂರು ಇಲ್ಲಿನ ವಿದ್ಯಾರ್ಥಿಗಳಿಗೆ ಎರಡು ಚಿನ್ನ ಹಾಗೂ ಒಂದು ಕಂಚಿನ ಪದಕ ಪಡೆದುಕೊಂಡಿದ್ದಾರೆ.



ಬಾಲಕರ ವಿಭಾಗದಲ್ಲಿ ಡೆಜಿಲ್ ರೊಯ್ 79+ ವಿಭಾಗದಲ್ಲಿ ಚಿನ್ನದ ಪದಕ, ನಿಶಾನ್ 65 + ವಿಭಾಗದಲ್ಲಿ ಚಿನ್ನದ ಪದಕ, ಹಾಗೂ ಬಾಲಕಿಯರ ವಿಭಾಗದಲ್ಲಿ ಯುಕ್ತ 53+ ವಿಭಾಗದಲ್ಲಿ ಕಂಚಿನ ಪದಕ ಪಡೆದುಕೊಂಡಿದ್ದಾರೆ.





ಇವರು ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ನರೇಶ್ ಲೋಬೊ ಮತ್ತು ಧನ್ಯಶ್ರೀ ಇವರಿಂದ ತರಬೇತಿಯನ್ನು ಪಡೆದುಕೊಂಡಿದ್ದಾರೆ.
ಇವರನ್ನು ಶಾಲಾ ಸಂಚಾಲಕರು, ಆಡಳಿತ ಮಂಡಳಿ, ಮುಖ್ಯ ಗುರುಗಳು,ರಕ್ಷಕ ಶಿಕ್ಷಕ ಸಂಘ, ಹಿರಿಯ ವಿದ್ಯಾರ್ಥಿ ಸಂಘ, ಶಿಕ್ಷಕ ಶಿಕ್ಷಕೇತರ, ಮತ್ತು ವಿದ್ಯಾರ್ಥಿ ವೃಂದದವರು ಅಭಿನಂದಿಸಿರುತ್ತಾರೆ.








