





ಪುತ್ತೂರು: ಆಟೋ ರಿಕ್ಷಾ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಘಟನೆ ನೆಹರುನಗರ ಸಮೀಪ ನ.8ರಂದು ನಡೆದಿದ್ದು, ಅಪಘಾತದಿಂದಾಗಿ ಆಟೋ ರಿಕ್ಷಾದಲ್ಲಿದ್ದ ಮೂವರು ಮತ್ತು ಕಾರಿನಲ್ಲಿದ್ದ ಇಬ್ಬರು ಗಾಯಗೊಂಡು ಪುತ್ತೂರಿನ ಪ್ರತ್ಯೇಕ ಎರಡು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.



ಬೆಳ್ಳಾರೆಗೆ ಔಷಧಿಗೆಂದು ಬಂದು ಮಂಗಳೂರು ಪಜೀರ್ ಕಡೆ ತೆರಳುತ್ತಿದ್ದ ಆಟೋ ರಿಕ್ಷಾ ಮತ್ತು ಕಬಕ ಕಡೆಯಿಂದ ಪುತ್ತೂರು ಕಡೆ ಬರುತ್ತಿದ್ದ ಕಾರು ನಡುವೆ ಡಿಕ್ಕಿ ನೆಹರುನಗರದಲ್ಲಿ ಡಿಕ್ಕಿ ಸಂಭವಿಸಿದೆ.













