







ಬೆಟ್ಟಂಪಾಡಿ: ಇಲ್ಲಿನ ಪ್ರಿಯದರ್ಶಿನಿ ಆಂಗ್ಲಮಾಧ್ಯಮ ಶಾಲೆಯ ಆಶ್ರಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಪುತ್ತೂರು ಶೈಕ್ಷಣಿಕ ವಲಯದ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ನ. 8 ರಂದು ಬೆಳಿಗ್ಗೆ ಚಾಲನೆ ನೀಡಲಾಯಿತು.




ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಧ್ವಜಾರೋಹಣಗೈದರು. ಶಾಸಕ ಅಶೋಕ್ ರೈ ಉದ್ಘಾಟಿಸಿ ಶುಭ ಹಾರೈಸಿದರು.ಮಾಜಿ ಶಾಸಕ ಸಂಜೀವ ಮಠಂದೂರು ಕ್ರೀಡಾ ಜ್ಯೋತಿ ಬೆಳಗಿಸಿದರು.







ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಎನ್. ಸಂಜೀವ ರೈ ಅರಂಬ್ಯ, ಪ್ರಗತಿಪರ ಕೃಷಿಕ ಕಡಮಜಲು ಸುಭಾಸ್ ರೈ, ಕ್ಷೇತ್ರಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಸಿ., ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ ಎ.ವಿ., ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬೂಡಿಯಾರ್ ರಾಧಾಕೃಷ್ಣ ರೈ, ಎಸ್.ಎಲ್.ವಿ. ಬುಕ್ ಹೌಸ್ ಮ್ಹಾಲಕ ದಿವಾಕರ ದಾಸ್, ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು ಮತ್ತಿತರ ಗಣ್ಯರು ಈ ವೇಳೆ ಭೇಟಿ ನೀಡಿ ಶುಭ ಹಾರೈಸಿದರು.


ಪ್ರಿಯದರ್ಶಿನಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ರಂಗನಾಥ ರೈ ಗುತ್ತು, ಸಂಚಾಲಕ ಡಾ. ಸತೀಶ್ ರಾವ್, ಬೆಳ್ಳಿಹಬ್ಬ ಸಮಿತಿಯ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಕ್ರೀಡಾಕೂಟ ಸಮಿತಿಯ ಅಧ್ಯಕ್ಷ ಮನಮೋಹನ ರೈ ಚೆಲ್ಯಡ್ಕ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಪ್ರಕಾಶ್ ರೈ ಬೈಲಾಡಿ, ಶಾಲಾ ಮುಖ್ಯಗುರು ರಾಜೇಶ್ ಎನ್. ಅತಿಥಿಗಳನ್ನು ಸ್ವಾಗತಿಸಿದರು.












