





ಪುತ್ತೂರು: ಕಡಬ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರ ಆರೋಪಿಯಾಗಿರುವ ಮಂಗಳೂರು ಬೇಂಗ್ರೆ ನಿವಾಸಿಯನ್ನು ಪೊಲೀಸರು ಬಂಧಿಸಿದ್ದಾರೆ.


ಸಾಮಾಜಿಕ ಜಾಲತಾಣವಾದ Instagram target_boy900 Instagram ಎಂಬ ಖಾತೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ದೇಶದ ಹಿನ್ನೆಲೆಯಲ್ಲಿ ನಡೆದ ಕೊಲೆಗೆ ಸಂಬಂಧಿಸಿದಂತೆ, ಪ್ರತೀಕಾರಕ್ಕೆ ಪ್ರಚೋದಿಸುವಂತಹ ಸಂದೇಶವನ್ನು ಪ್ರಸಾರ ಮಾಡಿದ್ದ ಬಗ್ಗೆ ಕಳೆದ ಜೂ.2ರಂದು ಕಡಬ ಪೊಲೀಸ್ ಠಾಣೆಯಲ್ಲಿ ಕಲಂ 55,353(2) r/w 103 BNS-2023 ರಂತೆ ದಾಖಲಾಗಿದ್ದ ಪ್ರಕರಣ (ಅ.ಕ್ರ 40/2025) ದ ತನಿಖೆ ನಡೆಸಿದ ಪೊಲೀಸರು ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಮಹಮ್ಮದ್ ಮುನಾವರ್ ಎಂಬಾತನನ್ನು ಬಂಧಿಸಿದ್ದಾರೆ.















