ನೆಲ್ಯಾಡಿ: ಶಬರೀಶ ಯಕ್ಷಗಾನ ಕಲಾಕೇಂದ್ರದ ವಾರ್ಷಿಕೋತ್ಸವ

0

ನೆಲ್ಯಾಡಿ: ಯಕ್ಷಗುರು ಪ್ರಶಾಂತ್ ಶೆಟ್ಟಿ ನೆಲ್ಯಾಡಿ ಅವರ ನೇತೃತ್ವದ ಶಬರೀಶ ಯಕ್ಷಗಾನ ಕಲಾ ಕೇಂದ್ರದ 8ನೇ ವಾರ್ಷಿಕೋತ್ಸವ ನ.8ರಂದು ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಕಲಾಮಂದಿರದಲ್ಲಿ ನಡೆಯಿತು.


ಉದ್ಯಮಿ, ಧಾರ್ಮಿಕ ಮುಂದಾಳು ಕಿರಣ್‌ಚಂದ್ರ ಪುಷ್ಪಗಿರಿ ಉದ್ಘಾಟಿಸಿ ಮಾತನಾಡಿ, ಸನಾತನ ಸಂಸ್ಕೃತಿಯ ಉಳಿವಿಗೆ ಕರಾವಳಿಯ ಗಂಡು ಕಲೆ ಯಕ್ಷಗಾನದ ಕೊಡುಗೆ ಅಪಾರವಾಗಿದೆ. ಜಾತಿ, ಮತ, ಧರ್ಮದ ಸ್ಪರ್ಶವಿಲ್ಲದ ಸಾಂಸ್ಕೃತಿಕ ಕಲೆ ಯಕ್ಷಗಾನದ ಉಳಿವಿಗೆ ಪ್ರಯತ್ನಿಸಬೇಕಿದೆ. ಪ್ರಸ್ತುತ ದಿನಗಳಲ್ಲಿ ಮಕ್ಕಳು ಮೊಬೈಲ್, ಟಿವಿಗಳ ಕಡೆಗೆ ಆಕರ್ಷಿತರಾಗಿ ಪಾಶ್ಚತ್ಯ ಸಂಸ್ಕೃತಿ ಅನುಕರಿಸುತ್ತಿದ್ದಾರೆ. ಇದರ ಬದಲು ಮಕ್ಕಳು ಯಕ್ಷಗಾನದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಬೇಕು. ಇದರಿಂದ ಮಕ್ಕಳಲ್ಲಿ ಪುರಾಣ ಕಥೆಗಳ ಜ್ಞಾನ ಹೆಚ್ಚಲಿದೆ ಎಂದರು.


ಕಲಾಕೇಂದ್ರದ ಅಧ್ಯಕ್ಷರಾದ ಸುಧೀರ್ ಕುಮಾರ್ ಕೆ.ಎಸ್.ಅಧ್ಯಕ್ಷತೆ ವಹಿಸಿದ್ದರು. ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಧ್ಯಕ್ಷರಾದ ಡಾ. ಸದಾನಂದ ಕುಂದರ್, ಕಡಬ ಉಪತಹಸೀಲ್ದಾರ್ ಗೋಪಾಲ್ ಕೆ, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ಕಡಬ ಶ್ರೀದೇವಿ ಯಕ್ಷಗಾನ ಕೇಂದ್ರದ ಅಧ್ಯಕ್ಷ ಕಿಶನ್‌ಕುಮಾರ್ ಶೆಟ್ಟಿ, ಜೊತೆ ಕಾರ್ಯದರ್ಶಿ ಜಯಂತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸನ್ಮಾನ ಕಾರ್ಯಕ್ರಮ;
ಯಕ್ಷ ಕಲಾ ಪೋಷಕ ಸುಬ್ರಹ್ಮಣ್ಯದ ಪದ್ಮನಾಭ ಮುಚ್ಚಿಂತ್ತಾಯ ದಂಪತಿ, ಕಲಾಕೇಂದ್ರದ ಗೌರವಾಧ್ಯಕ್ಷ ಜಯಾನಂದ ಬಂಟ್ರಿಯಾಲ್ ಹಾಗೂ ಸುಚಿತ್ರಾ ದಂಪತಿ, ಯಕ್ಷಗುರು ಪ್ರಶಾಂತ್ ಶೆಟ್ಟಿ ನೆಲ್ಯಾಡಿ ಅವರನ್ನು ಸನ್ಮಾನಿಸಲಾಯಿತು.

ಕಲಾಕೇಂದ್ರದ ಅಧ್ಯಕ್ಷ ಸುಧೀರ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕೋಶಾಧಿಕಾರಿ ಆನಂದ ಅಜಿಲ ವಂದಿಸಿದರು. ಹರಿಪ್ರಸಾದ್ ಕೆದಿಲ್ಲಾಯ ನಿರೂಪಿಸಿದರು.

LEAVE A REPLY

Please enter your comment!
Please enter your name here