





ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನ ಡಾ.ಅಂಬೇಡ್ಕರ್ ಕ್ರೀಡಾಂಗಣ ಬಸವೇಶ್ವರ ನಗರ ಇಲ್ಲಿ ನಡೆದ ರಾಜ್ಯ ಮಟ್ಟದ 14ರ ವಯೋಮಾನದ ಬಾಲಕರಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ತರುಣ್ ಕೃಷ್ಣ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿದ್ದಾನೆ.
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಕ್ರೀಡಾ ಪ್ರಾಧಿಕಾರ ಮತ್ತು ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಸಿದ ಮಿನಿ ಒಲಿಂಪಿಕ್ಸ್ ಕರ್ನಾಟಕ ಕ್ರೀಡಾಕೂಟದ ಕಬಡ್ಡಿ ಪಂದ್ಯಾಟದಲ್ಲಿ ಕೂಡ 14ರ ವಯೋಮಾನದ ಬಾಲಕರ ತಂಡದಲ್ಲಿ ಈತ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ ತಂಡದ ನಾಯಕನಾಗಿ ಭಾಗವಹಿಸಿರುತ್ತಾನೆ. ಈತ ಗೋಪಾಲಕೃಷ್ಣ ಎನ್ ಮತ್ತು ಸ್ವಪ್ನಾ ದಂಪತಿಗಳ ಪುತ್ರ.












