





ಪುತ್ತೂರು: ಪಂಜದಲ್ಲಿ ನಡೆದ ದ.ಕ.ಜಿಲ್ಲಾ ಮಟ್ಟದ ಕ್ರೀಡಾಕೂಟ ದಲ್ಲಿ ಮಣಿಕ್ಕರ ಸರಕಾರಿ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ನಿತಿನ್ 3000 ಮೀ ಓಟದಲ್ಲಿ ಬೆಳ್ಳಿ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.1500 ಮೀ ಓಟದಲ್ಲಿ ಕಂಚಿನ ಪದಕ ಪಡೆದುಕೊಂಡಿದ್ದಾರೆ.


ಪಾಲ್ತಾಡಿ ಗ್ರಾಮದ ಕಾಪುತಮೂಲೆ ಧರ್ಮಪಾಲ ನಾಯ್ಕ ಮತ್ತು ಶೀಲಾವತಿ ದಂಪತಿಯ ಪುತ್ರನಾಗಿರುವ ನಿತಿನ್ ಅವರಿಗೆ ಮಣಿಕ್ಕರ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಕರುಣಾಕರ ಮಣಿಯಾಣಿ ತರಬೇತಿ ನೀಡಿದ್ದಾರೆ.















