





ಪುಣಚ: ಕೋಟಿ ಚೆನ್ನಯ ಬಿಲ್ಲವ ಸಂಘ ಪುಣಚ ಇವರ ವತಿಯಿಂದ ಡಿ.7ರಂದು ನಡೆಯಲಿರುವ ಗುರುಪೂಜಾ ಕಾರ್ಯಕ್ರಮದ ಪ್ರಯುಕ್ತ ಸ್ವಜಾತಿ ಬಾಂಧವರ ಕ್ರೀಡಾಕೂಟವು ನ.16ರಂದು ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಎದುರು ಗದ್ದೆಯಲ್ಲಿ ನಡೆಯಲಿದೆ.


ಬೆಳಿಗ್ಗೆ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ದೇವಕಿ ಪಾದೆಕಟ್ಟ, ದಲ್ಕಾಜೆಗುತ್ತು, ವಿಟ್ಲ ಬಿಲ್ಲವ ಸಂಘದ ಅಧ್ಯಕ್ಷ ಜಯಪ್ರಕಾಶ್ ಪಾಣೆಮಜಲು ಭಾಗವಹಿಸಲಿದ್ದಾರೆ. ಬಳಿಕ ನಡೆಯುವ ಕ್ರೀಡಾಕೂಟದಲ್ಲಿ ಪುಣಚ, ಕೇಪು, ಬಲ್ನಾಡು, ವಿಟ್ಲ ಮುಡ್ನೂರು ಗ್ರಾಮದ ಬಿಲ್ಲವ ಸ್ವಜಾತಿ ಬಾಂಧವರ ಅಂಗನವಾಡಿ, ಶಾಲಾ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಸ್ಪರ್ಧೆಗಳು ನಡೆಯಲಿದೆ. ಬಿಲ್ಲವ ಸಮಾಜ ಭಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಪುಣಚ ಕೋಟಿ ಚೆನ್ನಯ ಬಿಲ್ಲವ ಸಂಘದ ಪ್ರಕಟಣೆ ತಿಳಿಸಿದೆ.















