





ಪುತ್ತೂರು: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನ.16ರಿಂದ ಡಿ.2ರ ತನಕ ನೆರವೇರಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ನ.14ರಿಂದ ಡಿ.2ರ ತನಕ ಸರ್ಪಸಂಸ್ಕಾರ ಸೇವೆ ನೆರವೇರುವುದಿಲ್ಲ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.


ನ.15ರಂದು ಶನಿವಾರ ಏಕಾದಶಿ ಹಾಗೂ ಮೂಲಮೃತ್ತಿಕಾ ಪ್ರಸಾದ ವಿತರಣೆ, ನ.16ರಂದು ಕೊಪ್ಪರಿಗೆ ಏರಿ ಜಾತ್ರಾ ಮಹೋತ್ಸವ ಆರಂಭವಾಗುವುದರಿಂದ ನ.14ರಿಂದಲೇ ಸರ್ಪಸಂಸ್ಕಾರ ಸೇವೆ ಆರಂಭವಾಗುವುದಿಲ್ಲ. ಡಿ.3 ಬುಧವಾರದಿಂದ ಸರ್ಪಸಂಸ್ಕಾರ ಸೇವೆ ಪುನರಾರಂಭಗೊಳ್ಳಲಿದೆ.





ಜಾತ್ರಾ ಸಮಯ ಸೇವೆಯಲ್ಲಿ ವ್ಯತ್ಯಯ
ಲಕ್ಷದೀಪೋತ್ಸವ (ನ.19), ಚೌತಿ (ನ.24), ಪಂಚಮಿ (ನ.25) ದಿನದಂದು ರಾತ್ರಿ ಹೊತ್ತಿನಲ್ಲಿ ಪ್ರಾರ್ಥನೆ ಸೇವೆ ಇರುವುದಿಲ್ಲ. ಚಂಪಾಷಷ್ಠಿ (ನ. 26) ದಿನದಂದು ಮಧ್ಯಾಹ್ನ ಪ್ರಾರ್ಥನೆ ಸೇವೆ ನಡೆಯುವುದಿಲ್ಲ. ಅಲ್ಲದೆ ಚಂಪಾಷಷ್ಠಿ ದಿನ ಆಶ್ಲೇಷಾ ಬಲಿ ಮತ್ತು ನಾಗಪ್ರತಿಷ್ಠೆ ಸೇವೆಗಳು ನೆರವೇರುವುದಿಲ್ಲ.
ಇತರ ಸೇವೆಗಳು ಎಂದಿನಂತೆ
ಜಾತ್ರೆ ಮತ್ತು ಪ್ರಮುಖ ದಿನಗಳನ್ನು ಬಿಟ್ಟು ಇತರ ದಿನಗಳಲ್ಲಿ ಆಶ್ಲೇಷಾ ಬಲಿ, ಪಂಚಾಮೃತ ಮಹಾಭಿಷೇಕ, ಶೇಷ ಸೇವೆ, ಕಾರ್ತಿಕಪೂಜೆ, ಮಹಾಪೂಜೆ, ತುಲಾಭಾರ, ನಾಗಪ್ರತಿಷ್ಠೆ, ಉತ್ಸವ, ರಥೋತ್ಸವ ಮೊದಲಾದ ಸೇವೆಗಳು ನೆರವೇರಲಿದೆ.










