







ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ಯಲ್ಲಿ 2025-26 ನೇ ಶೈಕ್ಷಣಿಕ ವರ್ಷದ ವಾರ್ಷಿಕ ಕ್ರೀಡಾಕೂಟವು ನವಂಬರ್ 14ರಂದು ಸಂಸ್ಥೆಯ ಭವ್ಯ ಕ್ರೀಡಾಂಗಣ ದಲ್ಲಿ ನಡೆಯಿತು.



ವಿದ್ಯಾರ್ಥಿಗಳ ಆಕರ್ಷಕ ಪಥ ಸಂಚಲನದ ಮೂಲಕ ಅಧ್ಯಕ್ಷರು ಹಾಗೂ ಗೌರವಾನ್ವಿತರು ಗೌರವ ವಂದನೆ ಸ್ವೀಕರಿಸಿದರು.



ರಾಜ್ಯ ಹಾಗೂ ತಾಲೂಕು ಮಟ್ಟದ ಕ್ರೀಡೆಯಲ್ಲಿ ಮಿಂಚಿದ ವಿದ್ಯಾರ್ಥಿಗಳಾದ ಭುವನ್ ಕರಂದ್ಲಾಜೆ 10ನೇ, ತುಷಾರ್ 10ನೇ,
ದುರ್ಗಾ ಪ್ರಸಾದ್ 10ನೇ, ದ್ವಿತೀ 6 ನೇ ತರಗತಿ ಕ್ರೀಡಾಜ್ಯೋತಿಯನ್ನು ಶಾಲಾ ಅಧ್ಯಕ್ಷಕರಿಗೆ ಹಸ್ತಾಂತರಿಸಿ ಕ್ರೀಡಾಜ್ಯೋತಿಯನ್ನು ಬೆಳಗಿಸಿದರು.ಮುಖ್ಯ ಗುರುಗಳಾದ ಪ್ರಸನ್ನ ಕೆ ವಿದ್ಯಾರ್ಥಿಗಳಿಗೆ ಕ್ರೀಡಾ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.
ಮುಖ್ಯ ಅತಿಥಿ ಪುತ್ತೂರು ತಾಲೂಕು ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಮಾತನಾಡಿ ಎಷ್ಟು ಸಲ ನಾವು ಸೋಲನ್ನು ಸ್ವೀಕರಿಸುತ್ತೇವೆಯೋ ಅಷ್ಟೇ ಸದೃಢರಾಗುತ್ತೇವೆ ಎಂದರು. ಪ್ರತಿದಿನ ಕ್ರೀಡೆಯಲ್ಲಿ, ಭಾಗವಹಿಸುದರ ಮೂಲಕ ಶರೀರವನ್ನು ಸದೃಢ ಮಾಡಿಕೊಂಡರೆ ಯಶಸ್ಸು ತಾನಾಗಿ ಬರುತ್ತದೆ. ಕಲಿಕೆಯ ಜೊತೆಗೆ ಕ್ರೀಡೆಯಲ್ಲೂ ಭಾಗವಹಿಸಿದರೆ ಆರೋಗ್ಯ ವೃದ್ಧಿಯಾಗುತ್ತದೆ ಎಂದರು.
ಶಾಲಾ ಅಧ್ಯಕ್ಷರಾದ ಶಿಬರ ಜಯರಾಮ ಕೆದಿಲಾಯ ಮಾತನಾಡಿ, ಕ್ರೀಡೆಯಲ್ಲಿ ಭಾಗವಹಿಸಿ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಕೀರ್ತಿವಂತರಾಗಿ ಎಂದರು.

ಈ ಸಂದರ್ಭದಲ್ಲಿ ಸಂಚಾಲಕ ಭಾಸ್ಕರ್ ಆಚಾರ್ ಹಿಂದಾರ್, ಆಡಳಿತ ಮಂಡಳಿಯ ಕಾರ್ಯದರ್ಶಿ ಕೃಷ್ಣ ಪ್ರಸಾದ್ ಕೆದಿಲಾಯ, ಶಾಲಾ ಉಪಾಧ್ಯಕ್ಷ ಪ್ರಸನ್ನ ಎನ್ ಭಟ್
ಆಡಳಿತ ಮಂಡಳಿಯ ಸದಸ್ಯ ಎಸ್ ಜಿ ಕೃಷ್ಣ, ಕೋಶಾಧಿಕಾರಿ ಹರೀಶ್ ಪುತ್ತೂರಾಯ, ಜೊತೆ ಕಾರ್ಯದರ್ಶಿ ಸುಬ್ರಾಯ ಬಿ ಎಸ್ ಉಪಸ್ಥಿತರಿದ್ದರು.
ಕಾರ್ಯದರ್ಶಿ ಕೃಷ್ಣ ಪ್ರಸಾದ್ ಕೆದಿಲಾಯ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಜಯಚಂದ್ರ ವಂದಿಸಿದರು. ಉಷಾ ನಿರೂಪಣೆ ಮಾಡಿದರು.
ನಂತರ ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆದು ಬಹುಮಾನ ವಿತರಿಸಲಾಯಿತು. ಈ ಸಂದರ್ಭ ಕ್ರೀಡಾ ಶಿಕ್ಷಕ ಮಂಜುನಾಥ್, ಸುದೀಕ್ಷಾ ಹಾಗೂ ಪೋಷಕರು, ಶಿಕ್ಷಕ- ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.










