





ವಿಟ್ಲ:ಹಲ್ಲೆ ಜೀವಬೆದರಿಕೆ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


ಕನ್ಯಾನ ನಿವಾಸಿ ಆನಂದ (39ದ.)ಎಂಬವರಿಗೆ 2020ರ ಸೆ.16ರಂದು ಅಜೀಝ್, ತೋಯಿಬ್,ಆಶೀಫ್,ಕಲೀಲ್, ಅಜೀಝ್, ಇತರರು ಸೇರಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದರೆಂದು ಆರೋಪಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿ ಕನ್ಯಾನ ನಿವಾಸಿ ಮೊಯಿದ್ದೀನ ಶಾಕೀರ್ ಯಾನೆ ಮೊಯಿದ ಶಾಕೀರ (27ದ.)ಎಂಬಾತ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡು ವಿದೇಶಕ್ಕೆ ತೆರಳಿದ್ದು ಆರೋಪಿಯ ಬಂಧನಕ್ಕೆ ನ್ಯಾಯಾಲಯ ವಾರೆಂಟ್ ಜಾರಿ ಮಾಡಿತ್ತು.ನ.13ರಂದು ಆರೋಪಿಯನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸ್ತಗಿರಿ ಮಾಡಿದ ಪೊಲೀಸರು ನ.14ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.ನ್ಯಾಯಾಲಯವು ಆರೋಪಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.















