





ಬಡಗನ್ನೂರು: ಬಡಗನ್ನೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕರ ಮತ್ತು ಶಿಕ್ಷಕರ ಮಹಾಸಭೆ ನ. 14 ರಂದು ನಡೆಯಿತು.



ಅತಿಥಿ ಅಭ್ಯಾಗತರಿಂದ ಮಾಜಿ ಪ್ರಧಾನಿ ಜವಹರಲಾಲ್ ನೆಹರುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ ಮಕ್ಕಳ ದಿನಾಚರಣೆ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿರು.





ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ರೖೆ ಪಳ್ಳತ್ತಾರು ಮಾತನಾಡಿ, ಸರಕಾರಿ ಶಾಲೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಉತ್ತಮ ಸಂಸ್ಕೃತಿ ಸಂಸ್ಕಾರ ದೊರೆಯುತ್ತದೆ. ಬಡ ಮಕ್ಕಳು ಅಂಗ್ಲ ಭಾಷೆಯಿಂದ ವಂಚಿತರಾಗಬಾರದು ಎಂಬ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ನಮ್ಮ ಸರಕಾರಿ ಶಾಲೆಯಲ್ಲೂ ಎಲ್. ಕೆ. ಜಿ ಮತ್ತು ಯು. ಕೆ. ಜಿ ಪ್ರಾರಂಭಿಸಲಾಗಿದೆ. ಗ್ರಾಮಸ್ಥರು ತಮ್ಮ ಮಕ್ಕಳನ್ನು ನಮ್ಮೂರ ಸರಕಾರಿ ಶಾಲೆಗೆ ಕಳಿಸುವ ಮೂಲಕ ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸಲು ಸಹಕರಿಸುವಂತೆ ವಿನಂತಿಸಿದರು.
ಬಡಗನ್ನೂರು ಗ್ರಾ. ಪಂ ಅಧ್ಯಕ್ಷೆ ಪುಷ್ಪಲತಾ ದೇವಕಜೆ, ಸಭಾಧ್ಯಕ್ಷತೆ ವಹಿಸಿ ಮಾತನಾಡಿ ಮಕ್ಕಳ ದಿನಾಚರಣೆ ಕಾರ್ಯಕ್ರಮದ ಜತೆಯಲ್ಲಿ ಪೋಷಕರ ಮತ್ತು ಶಿಕ್ಷಕರ ಸಭೆ ನಡೆಸುವಂತೆ ಸರಕಾರದ ಅದೇಶದಂತೆ ಕಾರ್ಯಕ್ರಮ ಅಯೋಜಿಸಲಾಗಿದೆ. ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಅಯೋಜಿಸಿ ವಿಜೆತರಿಗೆ ಬಹುಮಾನ ವಿತರಣೆ ಮಾಡಲಾಗಿದೆ. ಇದರಿಂದ ಮಕ್ಕಳ ಶಿಕ್ಷಣದ ಜೊತೆಗೆ ತಮ್ಮಲಿರುವ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಿದಂತಾಗಿದೆ ಎಂದು ಹೇಳಿ ಮಕ್ಕಳ ದಿನಾಚರಣೆಯ ಶುಭಾಶಯ ಸಲ್ಲಿಸಿದರು.

ವೇದಿಕೆಯಲ್ಲಿ ಬಡಗನ್ನೂರು ಗ್ರಾ. ಪಂ ಮಾಜಿ ಉಪಾಧ್ಯಕ್ಷ ಸಂತೋಷ ಆಳ್ವ ಗಿರಿಮನೆ, ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ನಾರಾಯಣ ರೖೆ ಕುದ್ಕಾಡಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗಿರೀಶ್ ಗೌಡ ಕನ್ನಯ, ಎಸ್ ಡಿಯಂಸಿ ತಿಂಗಳ ಉಸ್ತುವಾರಿ ಸದಸ್ಯೆರಾದ ವಿಜಯಲಕ್ಷ್ಮಿ ಮೖೆಂದನಡ್ಕ, ಶೋಭಾ ಕುದ್ಕಾಡಿ ಶಾಲಾ ನಾಯಕಿ ಫಾತಿಮತ್ ಶಫಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಎಸ್. ಡಿಯಂಸಿ ಉಪಾಧ್ಯಕ್ಷೆ ಸುಲೋಚನಾ ನೇರ್ಲಂಪ್ಪಾಡಿ, ಮಾಜಿ ಅಧ್ಯಕ್ಷರಾದ ಮಹಾಲಿಂಗ ಪಾಟಾಳಿ ಕುದ್ಕಾಡಿ, ಬಾಬು ಮೂಲ್ಯ ಮೖೆಂದನಡ್ಕ, ಹಿರಿಯ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಸುಬ್ರಾಯ ನಾಯ್ಕ, ಹಾಗೂ ಎಸ್ ಡಿಯಂಸಿ ಸದಸ್ಯರು ಮಕ್ಕಳ ಪೋಷಕರು ಮತ್ತು ಶಿಕ್ಷಣಾಭಿಮಾನಿಗಳು ಭಾಗವಹಿಸಿದ್ದರು.
ಈ ಸಂಧರ್ಭದಲ್ಲಿ ಎಸ್ ಬಿಐ ಲೖೆಪ್ ಇನ್ಸೂರೆನ್ಸ್ ಬಗ್ಗೆ ನಿವೖತ್ತ ಮುಖ್ಯ ಶಿಕ್ಷಕ ಮುದರ ಮಾಹಿತಿ ನೀಡಿದರು ಮತ್ತು ಇತ್ತೀಚಿಗೆ ಎಸ್. ಬಿ. ಐ ವತಿಯಿಂದ ನಡೆಸಲಾದ ಚಿತ್ರ ಕಲೆ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಬಳಿಕ ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಅಯೋಜಿಸಲಾಗಿದ್ದು, ವಿಜೇತರಿಗೆ ಈ ಸಂದರ್ಭದಲ್ಲಿ ಬಹುಮಾನ ವಿತರಣೆ ಮಾಡಲಾಯಿತು.
ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ ಸ್ವಾಗತಿಸಿದರು. ಅತಿಥಿ ಶಿಕ್ಷಕಿ ಚೖೆತ್ರಾ ಬಹುಮಾನ ಪಟ್ಟಿ ವಾಚಿಸಿದರು. ಗೌರವ ಶಿಕ್ಷಕಿ ಮಧುಶ್ರೀ ವಂದಿಸಿದರು. ಸಹಶಿಕ್ಷಕಿ ಶಶಿಕಲಾ, ಅತಿಥಿ ಶಿಕ್ಷಕರಾದ ಸರಿತಾ ಕೆ ಸೌಮ್ಯ ಸಹಕರಿಸಿದರು.










