





ಪುತ್ತೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಾಬ್ದಿಯ ಅಂಗವಾಗಿ ನ.19 ರಂದು ಪುತ್ತೂರಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಅಟಲ್ ವಿರಾಸತ್ ಕಾರ್ಯಕ್ರಮದ ಹಿನ್ನಲೆಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಪುತ್ತೂರು ಶ್ತೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಸುಕೃತೀಂದ್ರ ಕಲಾ ಮಂದಿರದಲ್ಲಿ ಪೂರ್ವ ಸಿದ್ಧತಾ ಸಭೆಯು ನ.15 ರಂದು ನಡೆಯಿತು.



ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸಹಿತ ಜಿಲ್ಲಾ ಮಟ್ಟದ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ ಕಾರ್ಯಕ್ರಮದ ಒಟ್ಟು ರೂಪುರೇಷೆಯನ್ನು ತಿಳಿಸಲಾಯಿತು.













