





ಪುತ್ತೂರು: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಆಟೋ ರಿಕ್ಷಾವೊಂದು ಡಿಕ್ಕಿಯಾದ ಘಟನೆ ಬನ್ನೂರಿನಲ್ಲಿ ನಡೆದಿದೆ.


ಬನ್ನೂರು ಕರ್ಮಲ ನಿವಾಸಿ ಚಂದ್ರಶೇಖರ ಅಚಾರ್ಯ ಅವರ ಪತ್ನಿ ನಿರ್ಮಲ ಕೆ ಅವರು ಗಾಯಗೊಂಡವರು. ನಿರ್ಮಲ ಕೆ ಅವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಪ್ರೀತಮ್ ಎಂಬವರು ಚಲಾಯಿಸುತ್ತಿದ್ದ ಆಟೋ ರಿಕ್ಷಾ ಅವರಿಗೆ ಡಿಕ್ಕಿಯಾಗಿದೆ. ಡಿಕ್ಕಿಯಿಂದ ರಸ್ತೆಗೆ ಬಿದ್ದ ನಿರ್ಮಲ ಅವರಿಗೆ ಗಾಯವಾಗಿದ್ದು, ಅವರನ್ನು ಪುತ್ತೂರು ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











