





ಪುತ್ತೂರು: ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾರ ಇಲ್ಲಿಮಕ್ಕಳ ದಿನಾಚರಣೆ ಹಾಗೂ ಪೋಷಕರ ಮಹಾಸಭೆ ನಡೆಯಿತು.



ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಅಝೀಝ್ ಬಿ.ಕೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಹಮ್ಮದ್ ಬಡಗನ್ನೂರು ಮಕ್ಕಳ ಕಲಿಕೆಯಲ್ಲಿ ಪೋಷಕರ ಪಾತ್ರ ಹಾಗೂ ಸಮಗ್ರ ಕಲಿಕಾ ವಿಧಾನಗಳ ಬಗ್ಗೆ ವಿಸ್ತಾರವಾಗಿ ವಿವರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಗುರುಗಳಾದ ಜಯಶ್ರೀ ಎಂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.





ಕಾರ್ಯಕ್ರಮವನ್ನು ಸಂಧ್ಯಾ ನಿರೂಪಣೆ ಮತ್ತು ಪೋಷಕರಿಗೆ LBAಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಉಷಾ ಕಲಿಕೆಯಲ್ಲಿ ಪ್ರಥಮ ಸ್ಥಾನ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳ ಮಾಹಿತಿ ವಾಚಿಸಿದರು. ಅವರಿಗೆ ಮುಖ್ಯ ಅತಿಥಿಗಳು ಬಹುಮಾನ ವಿತರಿಸಿದರು. ಸಮಾರಂಭದಲ್ಲಿ ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷೆ ಅಸ್ಮಾ, ಸಮಿತಿ ಸದಸ್ಯರುಗಳು, ಪೋಷಕರು ಹಾಗೂ ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮನಾ ಧನ್ಯವಾದ ಸಮರ್ಪಿಸಿದರು.










