ನಾಳೆ (ನ.17ಕ್ಕೆ) 33ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಪೂರ್ವಭಾವಿ ಸಭೆ

0


ಪುತ್ತೂರು: 33ನೇ ವರ್ಷದ ಐತಿಹಾಸಿಕ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದ ಪೂರ್ವಭಾವಿ ಸಭೆಯು ನ.17ರಂದು ಸಂಜೆ ಗಂಟೆ 4ಕ್ಕೆ ಮಹತೋಭಾರ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ.


ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಭೆಯಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಶಾಸಕ ಅಶೋಕ್ ಕುಮಾರ್ ರೈ ಹಾಗು ಮಾಜಿ ಶಾಸಕಿ ಶಂಕುಂತಳಾ ಟಿ ಶೆಟ್ಟಿಯವರು ಭಾಗವಹಿಸಲಿದ್ದಾರೆ. ಕಂಬಳ ಸಮಿತಿಯ ಸದಸ್ಯರೆಲ್ಲರೂ ತಪ್ಪದೆ ಹಾಜರಾಗಿ ಸಲಹೆ ಸೂಚನೆಗಳನ್ನು ನೀಡಬೇಕಾಗಿ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿಯವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here