





ರಾಮಕುಂಜ: ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಹಾಗೂ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಆಶ್ರಯದಲ್ಲಿ ವಿಶ್ವೇಶ ಸೇವಾ ಸಮಿತಿಯ ವಾರ್ಷಿಕ ಶಿಬಿರದ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಎರಡು ದಿನದ ನಾಟಕ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಜರುಗಿತು.


ಕಾಂಚನ ಪ್ರೌಢಶಾಲೆಯ ಮುಖ್ಯಗುರು ರಮೇಶ್ ಮಯ್ಯ ಅವರು ಉದ್ಘಾಟಿಸಿ ಶುಭ ಹಾರೈಸಿದರು. ನಾಟಕ ತರಬೇತುದಾರರಾದ ನೀನಾಸಂ ಪದವೀಧರೆ ಭವಾನಿ ಶುಭ ಹಾರೈಸಿದರು. ಪ್ರೌಢಶಾಲಾ ಮುಖ್ಯಗುರು ಸತೀಶ್ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ರಕ್ಷಕ ಶಿಕ್ಷಕ ಸಂಘದ ಖಜಾಂಚಿ, ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕರಾದ ಶಿವಪ್ರಸಾದ್ ವಂದಿಸಿದರು. ಶಿಕ್ಷಕ ದಿನೇಶ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರಾದ ದಿಶಾ ಡಿ.ಕೆ ಹಾಗೂ ತನುಶ್ರೀ ಪ್ರಾರ್ಥಿಸಿದರು.












