ನ.21: VCET ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ ನವರಂಗ್- 2025 & ಸ್ಟಾರ್ಟ್‌ಆಪ್ ಗಳ ಉದ್ಘಾಟನೆ

0

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ವಾರ್ಷಿಕೋತ್ಸವ ಸಮಾರಂಭ ನವರಂಗ್-2025 ಮತ್ತು ಕಾಲೇಜು ಆವರಣದಲ್ಲಿ ಪ್ರಾರಂಭಗೊಳ್ಳಲಿರುವ ಸ್ಟಾರ್ಟ್‌ಅಪ್ ಗಳ ಉದ್ಘಾಟನೆ ನ.21 ನಡೆಯಲಿದೆ.


ಬೆಳಿಗ್ಗೆ 9.30ಕ್ಕೆ ಕಾಲೇಜಿನ ಕೃಷ್ಣ ಚೇತನಾ ಕಟ್ಟಡದಲ್ಲಿ ನಿರ್ಮಾಣಗೊಂಡಿರುವ ನೂತನ ಸ್ಟಾರ್ಟ್-ಅಪ್ ವಿಭಾಗ ಲಾಂಚ್‌ವರ್ಸ್‌ನಲ್ಲಿ ದ ವೆಬ್ ಪೀಪಲ್ ಮತ್ತು ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ ಇದರ ಕಛೇರಿಗಳ ಉದ್ಘಾಟನೆ ನಡೆಯಲಿದೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಮಂಗಳೂರು
ಲೋಕಸಭಾ ಕ್ಷೇತ್ರದ ಸಂಸದ ಕ್ಯಾ.ಬೃಜೇಶ್ ಚೌಟ ದೀಪ ಪ್ರಜ್ವಲನೆ ಮಾಡಲಿದ್ದಾರೆ. ದ ವೆಬ್ ಪೀಪಲ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಣಾಧಿಕಾರಿ ಆದಿತ್ಯ ಕಲ್ಲೂರಾಯ, ಮುಖ್ಯ ಕಾರ್ಯಾಚರಣಾಧಿಕಾರಿ ಶರತ್ ಶ್ರೀನಿವಾಸ್, ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯನಿರ್ವಹಣಾ ನಿರ್ದೇಶಕ ಡಾ.ಶ್ರೀಶ ಭಟ್, ಕಾಲೇಜು ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಾಂಶುಪಾಲರು ಮತ್ತು ಇತರ ಗಣ್ಯರು ಇದರಲ್ಲಿ ಭಾಗವಹಿಸುತ್ತಾರೆ.


ಬೆಳಿಗ್ಗೆ 10 ಗಂಟೆಗೆ ಕಾಲೇಜು ವಾರ್ಷಿಕೋತ್ಸವ ಸಮಾರಂಭ ನವರಂಗ್-2025 ಇದರ ಸಭಾ ಕಾರ್ಯಕ್ರಮ ನಡೆಯಲಿದ್ದು, ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾ.ಬೃಜೇಶ್ ಚೌಟ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ದ ವೆಬ್ ಪೀಪಲ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಣಾಧಿಕಾರಿ ಆದಿತ್ಯ ಕಲ್ಲೂರಾಯ ಗೌರವ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ.


ಕಳೆದ ಶೈಕ್ಷಣಿಕ ವರ್ಷದಲ್ಲಿ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು. ಅಲ್ಲದೆ ಪ್ರತಿ ವಿಭಾಗದಲ್ಲಿ ಶೈಕ್ಷಣಿಕ ಸಾಧನೆಯನ್ನು ಮಾಡಿದ, ದತ್ತಿ ನಿಧಿ ಪ್ರಶಸ್ತಿಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು. ಸಾಹಿತ್ಯಿಕ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಚಾಂಪಿಯನ್ ಆದ ತಂಡಗಳಿಗೆ ಬಹುಮಾನ
ವಿತರಣೆಯೂ ನಡೆಯುತ್ತದೆ. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here