





ರಾಮಕುಂಜ: ಇಲ್ಲಿನ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ರಕ್ಷಾ ಡಿ. ಅವರು ತನ್ನ ಕೈಗಳನ್ನು ಸೊಂಟದಲ್ಲಿ ಹಿಡಿದುಕೊಂಡು ಮುಂಗೈಯನ್ನು ಹಿಂದಕ್ಕೆ ಹಾಗೂ ಮುಂದಕ್ಕೆ ನಿಮಿಷಕ್ಕೆ 172 ಸಲ ಮುಟ್ಟಿಸುವುದರ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಮಾಡಿದ್ದಾರೆ.


ಈಕೆ ಈ ಮೊದಲು ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲೂ ದಾಖಲೆ ನಿರ್ಮಿಸಿದ್ದರು. ಮೂಲತ: ಬೆಳ್ತಂಗಡಿ ತಾಲೂಕಿನ ಬಾರ್ಯ ನಿವಾಸಿ, ಪ್ರಸ್ತುತ ಬಜತ್ತೂರು ಗ್ರಾಮದ ಒರುಂಬೋಡಿಯಲ್ಲಿ ವಾಸ್ತವ್ಯವಿರುವ ಧರ್ಣಪ್ಪ ಪೂಜಾರಿ ಹಾಗೂ ವನಿತಾ ದಂಪತಿಯ ಪುತ್ರಿ. ಇವರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ. ಸೇಸಪ್ಪ ರೈ, ಆಡಳಿತ ಅಧಿಕಾರಿ ಆನಂದ ಎಸ್.ಟಿ., ವ್ಯವಸ್ಥಾಪಕ ರಮೇಶ್ ರೈ, ಮುಖ್ಯಗುರುಗಳು, ಶಿಕ್ಷಕ-ರಕ್ಷಕ ಸಂಘ, ಶಿಕ್ಷಕ-ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.














