ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ‘ಚೇತನ’ ಕಾರ್ಯಕ್ರಮ

0

ಪುತ್ತೂರು: ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ನ.22ರಂದು 8, 9, 10ನೇ ತರಗತಿಯ ವಿದ್ಯಾರ್ಥಿಗಳು ಮತ್ತು 6, 7ನೇ ತರಗತಿಗಳ ಸ್ಕೌಟ್ಸ್ ಗೈಡ್ಸ್ ಮಕ್ಕಳಿಗೆ “ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ” ಎಂಬ ವಿಷಯದ ಕುರಿತು ‘ಚೇತನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಾನಸಿಕ ತಜ್ಞೆ ರಾಜೇಶ್ವರಿ ನೇಜಿಕಾರ್ ಅವರು, ಮಕ್ಕಳು ತಮ್ಮ ಹೆಚ್ಚಿನ ಸಮಯವನ್ನು ಮೊಬೈಲ್ ಇನ್ನಿತರ ಮಾಧ್ಯಮಗಳನ್ನು ಬಳಸುತ್ತಾ ಕಾಲ ಕಳೆಯುತ್ತಾರೆ. ಇವುಗಳು ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತವಾದ ಪರಿಣಾಮವನ್ನು ಬೀರುತ್ತವೆ. ಆದ್ದರಿಂದ ಅವುಗಳನ್ನು ಬಿಟ್ಟು, ಪುಸ್ತಕಗಳನ್ನು ಓದುವುದು ಹಾಗೂ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದನ್ನು ರೂಢಿಸಿಕೊಳ್ಳಬೇಕು ಎಂದು ಹಿತನುಡಿಗಳನ್ನಾಡಿದರು. ನಂತರ, ಸಾಮಾಜಿಕ ಜಾಲತಾಣಗಳ ಒಳಿತು ಕೆಡುಕುಗಳ ಬಗ್ಗೆ ತಿಳಿಸುತ್ತಾ, ಇದನ್ನು ವಿದ್ಯಾರ್ಥಿಗಳು ಸರಿಯಾಗಿ ಮನವರಿಕೆ ಮಾಡಿಕೊಂಡು ತಮ್ಮ ಮಾನಸಿಕ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲೆ ಸಿಂಧು ವಿ.ಜಿ, ಉಪಪ್ರಾಂಶುಪಾಲೆ ಶ್ರೀದೇವಿ ಹೆಗ್ಡೆ, ಗೈಡ್ಸ್ ಕ್ಯಾಪ್ಟನ್ ಪ್ರಫುಲ್ಲ. ಕೆ, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ 10 ನೇ ತರಗತಿಯ ವಿದ್ಯಾರ್ಥಿನಿಯರಾದ ಪೂರ್ವಿ ಬಿ. ಕೆ ಸ್ವಾಗತಿಸಿ, ದೃಶ್ಯ ಕಾರ್ಯಕ್ರಮ ನಿರೂಪಿಸಿ, ಪೂಜಾ ಶ್ರೀ ವಂದಿಸಿದರು.

LEAVE A REPLY

Please enter your comment!
Please enter your name here