





ಪುತ್ತೂರು: ಸಂಟ್ಯಾರ್ ಬದ್ರಿಯಾ ಜಮಾತ್ ಕಮಿಟಿ ಅಧ್ಯಕ್ಷ ಎಚ್ ಪಿ ಅಬ್ದುಲ್ ಜಲೀಲ್ ಹಾಜಿಯವರು ನ.25ರಂದು ನಿಧನರಾಗಿದ್ದಾರೆ. ಇವರ ನಿಧನಕ್ಕೆ ಶಾಸಕ ಅಶೋಕ್ ರೈ ಸಂತಾಪ ವ್ಯಕ್ತಪಡಿಸಿದ್ದಾರೆ. ಪಕ್ಷದ ಹಿರಿಯ ನಾಯಕರೂ,ಸಜ್ಜನ ವ್ಯಕ್ತಿಯನ್ನು ಕಳೆದುಕೊಂಡಿದ್ದೇವೆ ಎಂದು ಶಾಸಕರು ಸಂತಾಪ ವ್ಯಕ್ತಪಡಿಸಿದ್ದು, ಕುಟುಂಬಕ್ಕೆ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ ಎಂದು ಸಾಂತ್ವನ ತಿಳಿಸಿದರು.









