





ರಾಮಕುಂಜ: ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆ ವಾರ್ಷಿಕ ಕ್ರೀಡಾಕೂಟ ನಡೆಯಿತು.


ಹಿರಿಯ ವಿದ್ಯಾರ್ಥಿ ನೀರಜ್ ಕುಮಾರ್ ರೈ ಪಥಸಂಚಲನದಲ್ಲಿ ವಿದ್ಯಾರ್ಥಿಗಳ ಗೌರವ ವಂದನೆಯನ್ನು ಸ್ವೀಕರಿಸಿದರು.ಅಲಂಕಾರು ದ.ಕ.ಜಿ.ಪಂ.ಉ.ಹಿ.ಪ್ರಾ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ರಾಘವೇಂದ್ರ ಪ್ರಸಾದ್ ಕ್ರೀಡಾ ಜ್ಯೋತಿ ಬೆಳಗಿಸಿದರು. ಅತಿಥಿಗಳು ಧ್ವಜಾರೋಹಣ ನೆರವೇರಿಸಿದರು.





ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ರಾಮಕುಂಜದ ಪ್ರಾಚಾರ್ಯ ಚಂದ್ರಶೇಖರ ಕೆ ಮಾತನಾಡಿ, ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಸಾಧನೆಯನ್ನು ಮಾಡಿರುತ್ತಾರೆ ಹೀಗೆ ಇವರ ಸಾಧನೆ ಮುಂದುವರೆಯಲಿ ಸಂಸ್ಥೆಗೆ ಇನ್ನೂ ಹೆಚ್ಚಿನ ಕೀರ್ತಿಯನ್ನು ತರುವಂತಾಗಲಿ ಎಂದು ಶುಭ ಹಾರೈಸಿದರು.
ಪ್ರೌಢಶಾಲಾ ಮುಖ್ಯ ಶಿಕ್ಷಕ ಸತೀಶ್ ಭಟ್ ಹಾಗೂ ದಿನೇಶ ಇವರು ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕ ಕೀರ್ತನ್ ಸ್ವಾಗತಿಸಿದರು. ಪ್ರೌಢಶಾಲಾ ಅಧ್ಯಾಪಕ ವೆಂಕಟೇಶ್ ದಾಮ್ಲೆ ವಂದಿಸಿದರು. ಕಾಲೇಜು ಉಪನ್ಯಾಸಕ ಸುಬ್ರಹ್ಮಣ್ಯ ಕಾರಂತ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕ ಗಣೇಶ್ ಕೆ ಹಾಗೂ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲಾ ರೈ ಸಂಯೋಜಿಸಿದರು.
ಸಮಾರಂಭದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ಆರೋಗ್ಯ ಪ್ರದರ್ಶನ ಕಾಲೇಜು ವಿದ್ಯಾರ್ಥಿಗಳಿಂದ ಪಿರಮಿಡ್ ಪ್ರದರ್ಶನ ಕಾಲೇಜಿನ ಹಿರಿಯ ವಿದ್ಯಾರ್ಥಿಗಳನ್ನು ಒಳಗೊಂಡ ಶ್ರೀ ಕಪಿಲೇಶ್ವರ ಕಲಾ ಸಮಿತಿ ಕೊಯಿಲ ಇವರಿಂದ ಆಕರ್ಷಕ ಚೆಂಡೆ ಪ್ರದರ್ಶನ ನಡೆಯಿತು. ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಸಹಕರಿಸಿದರು.









