





ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದುಕೊಂಡು ಬರುತ್ತಿರುವ ಚತುರ್ವಿಧ ದಾನ ಪರಂಪರೆಯನ್ನು ಚಾಚೂ ತಪ್ಪದೆ ಪಾಲಿಸಿಕೊಂಡು ಬಂದಿರುವ ಡಾ. ಡಿ ವೀರೇಂದ್ರ ಹೆಗ್ಗಡೆಯವರ 78ನೇ ವರ್ಷದ ಹುಟ್ಟು ಹಬ್ಬದ ಸಲುವಾಗಿ ಜನಜಾಗೃತಿ ವೇದಿಕೆ ಮತ್ತು ಪುತ್ತೂರು ಯೋಜನಾ ಕಚೇರಿಯ ನೇತೃತ್ವದಲ್ಲಿ ನ.25ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಪೂಜೆ, ಆಶ್ರಮಗಳಿಗೆ ಸಿಹಿ ವಿತರಣೆ ಕಾರ್ಯಕ್ರಮ ನಡೆಯಿತು.



ಮಧ್ಯಾಹ್ನ ಮಹಾಪೂಜೆಯ ಆರಂಭದಲ್ಲಿ ಸಂಕಲ್ಪ,ಪೂಜೆಯ ಬಳಿಕ ವಿಶೇಷ ಪ್ರಾರ್ಥನೆಯನ್ನು ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ನೆರವೇರಿಸಿದರು. ಈ ಸಂದರ್ಭ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ತಾಲೂಕು ಅಧ್ಯಕ್ಷ ಯು ಲೋಕೇಶ್ ಹೆಗ್ಡೆ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯ ಮಹಾಬಲ ರೈ ವಳತ್ತಡ್ಕ, ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ, ಟಿಎಪಿಸಿಎಂಎಸ್ನ ಅಧ್ಯಕ್ಷ ಕೃಷ್ಣಕುಮಾರ್ ರೈ, ಸ್ವರ್ಣಲತಾ ಹೆಗ್ಡೆ, ಪುತ್ತೂರು ಯೋಜನಾಧಿಕಾರಿ ಶಶಿಧರ್, ಶಕುಂಲಾ, ಮ್ಯಾನೇಜರ್ ಅರ್ಚನಾ ಮತ್ತು ಸಿಬ್ಬಂದಿಗಳು ಜೊತೆಗಿದ್ದರು.















