





ಪುತ್ತೂರು: ಜಿಲ್ಲೆಯ ಹಿರಿಯ ಕ್ಲಬ್ ಎನಿಸಿದ ರೋಟರಿ ಕ್ಲಬ್ ಪುತ್ತೂರು ಇದೀಗ 60ನೇ ವರ್ಷದ ಸಂಭ್ರಮವನ್ನು ಆಚರಿಸುತ್ತಿದ್ದು ಅಂತರರಾಷ್ಟ್ರೀಯ ರೋಟರಿ ಫೌಂಡೇಶನ್ ನ ಗ್ಲೋಬಲ್ ಗ್ರ್ಯಾಂಟ್ ಪ್ರಾಜೆಕ್ಟ್ ಆಗಿರುವ ರೋಟರಿ ಮ್ಯಾಮೋಗ್ರಾಫಿ ಸೆಂಟರ್ ನ ಉದ್ಘಾಟನೆಯು ನ.28 ರಂದು ಬೊಳ್ವಾರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ ಜರಗಲಿದೆ.
ಅಂತರರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ಐದರ ರೋಟರಿ ಕ್ಲಬ್ ಪುತ್ತೂರು ಹಾಗೂ ಜಿಲ್ಲೆ 6540, ರೋಟರಿ ಕ್ಲಬ್ ಸ್ಕೆರೆರ್ವಿಲ್ ಯು.ಎಸ್.ಎ ಇವುಗಳ ಜಂಟಿ ಪ್ರಾಜೆಕ್ಟ್ ಆಗಿರುವ ರೋಟರಿ ಮ್ಯಾಮೋಗ್ರಾಫಿ ಸೆಂಟರ್ ನ ಉದ್ಘಾಟನೆಯನ್ನು ಅಂತರರಾಷ್ಟ್ರೀಯ ರೋಟರಿ ಜಿಲ್ಲೆ 3181 ಇದರ ಜಿಲ್ಲಾ ಗವರ್ನರ್ ರಾಮಕೃಷ್ಣ ಪಿ.ಕೆರವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅನಿವಾಸಿ ಉದ್ಯಮಿ ಮೈಕಲ್ ಡಿ’ಸೋಜ, ಗೌರವ ಅತಿಥಿಗಳಾಗಿ ರೋಟರಿ ಮಾಜಿ ಜಿಲ್ಲಾ ಗವರ್ನರ್ ಕೆ.ಕೃಷ್ಣ ಶೆಟ್ಟಿ, ಡಿ.ಆರ್.ಎಫ್.ಸಿ ರಂಗನಾಥ ಭಟ್, ನಿಕಟಪೂರ್ವ ಜಿಲ್ಲಾ ಗವರ್ನರ್ ವಿಕ್ರಂ ದತ್ತ, ರೋಟರಿ ವಲಯ ಐದರ ಅಸಿಸ್ಟೆಂಟ್ ಗವರ್ನರ್ ಬಾಲಕೃಷ್ಣ ಪೈ, ವಲಯ ಸೇನಾನಿ ಉಮಾನಾಥ್ ಪಿ.ಬಿರವರು ಭಾಗವಹಿಸಲಿದ್ದಾರೆ ಎಂದು ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಷ ಡಾ.ಶ್ರೀಪ್ರಕಾಶ್ ಬಿ, ಕಾರ್ಯದರ್ಶಿ ಪ್ರೊ.ಸುಬ್ಬಪ್ಪ ಕೈಕಂಬ, ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಯು.ಶ್ರೀಪತಿ ರಾವ್, ಪ್ರಾಜೆಕ್ಟ್ ಚೇರ್ಮನ್ ಡಾ.ಶ್ಯಾಮ್ ಬಿ.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ರೋಟರಿ ಪುತ್ತೂರು ಮುಕುಟಕ್ಕೆ ಮತ್ತೊಂದು ಗರಿ..
60ನೇ ವರ್ಷದ ಸಂಭ್ರಮವನ್ನು ಆಚರಿಸುತ್ತಿರುವ ರೋಟರಿ ಕ್ಲಬ್ ಪುತ್ತೂರು ಈಗಾಗಲೇ ಅಂತರರಾಷ್ಟ್ರೀಯ ರೋಟರಿ ಫೌಂಡೇಶನ್ ನ ಗ್ಲೋಬಲ್ ಗ್ರ್ಯಾಂಟ್ ಮೂಲಕ ಸುಸಜ್ಜಿತ ಬ್ಲಡ್ ಬ್ಯಾಂಕ್, ಡಯಾಲಿಸಿಸ್ ಸೆಂಟರ್, ಬ್ಲಡ್ ಕಲೆಕ್ಷನ್ ವಾಹನ, ರೋಟರಿ ಕಣ್ಣಿನ ಆಸ್ಪತ್ರೆ, ರೋಟರಿ ಮಲ್ಟಿ ಸ್ಪೆಷಾಲಿಟಿ ಡೆಂಟಲ್ ಕ್ಲಿನಿಕ್, ರೋಟರಿಪುರದಲ್ಲಿ ಮನೆಗಳ ನಿರ್ಮಾಣ ಸೇರಿದಂತೆ ಹಲವಾರು ಶಾಶ್ವತ ಕೊಡುಗೆಗಳನ್ನು ಸಮಾಜಕ್ಕೆ ನೀಡಿದೆ. ಇದೀಗ ಮ್ಯಾಮೋಗ್ರಾಫಿ ಸೆಂಟರ್ ಉದ್ಘಾಟಿಸುವ ಮುಖೇನ ರೋಟರಿ ಪುತ್ತೂರು ಇದರ ಮುಕುಟಕ್ಕೆ ಮತ್ತೊಂದು ಗರಿ ಪೋಣಿಸಿದಂತಾಗಿದೆ.









