





ಮೂವರು ಪ್ರಧಾನ ಕಾರ್ಯದರ್ಶಿಗಳು ರಾಜೀನಾಮೆ ನೀಡಿಲ್ಲ!


ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ನಗರ ಹಾಗೂ ಗ್ರಾಮಾಂತರ ಮಂಡಲಗಳಿಗೆ ಮುಂದಿನ ಸಂಘಟನಾ ಅವಧಿಗೆ ನೂತನ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.





ಪುತ್ತೂರು ನಗರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾಗಿ ಯುವರಾಜ್ ಪಿರಿಯತ್ತೋಡಿ, ಶಶಿಧರ್ ನಾಯಕ್ ಹಾಗೂ ಪುತ್ತೂರು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾಗಿ ಸುನೀಲ್ ದಡ್ಡು, ಲೋಕೇಶ್ ಚಾಕೋಟೆ ಅವರನ್ನು ಮಂಡಲದ ಅಧ್ಯಕ್ಷರು ನಿಯುಕ್ತಿಗೊಳಿಸಿದ್ದಾರೆ.
ಮೂವರು ಪ್ರಧಾನ ಕಾರ್ಯದರ್ಶಿಗಳು ರಾಜೀನಾಮೆ ನೀಡಿಲ್ಲ!
ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿಗಳಲ್ಲಿ ಧಿಡೀರ್ ಬದಲಾವಣೆ ಆಗಿದೆ. ಆದರೆ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕೋಡಿಬೈಲು, ಪ್ರಶಾಂತ್ ನೆಕ್ಕಿಲಾಡಿ, ನಗರಮಂಡಲದ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ ಅವರು ರಾಜೀನಾಮೆ ನೀಡಿಲ್ಲ. ಆದರೆ ನಗರ ಮಂಡಲದ ಇನ್ನೋರ್ವ ಪ್ರಧಾನ ಕಾರ್ಯದರ್ಶಿ ನಾಗೇಶ್ ಪೈ ಅವರು ಈ ಹಿಂದೆಯೆ ವೈಯುಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದರು. ಆದರೆ ಪಕ್ಷ ಅದನ್ನು ಸ್ವೀಕರಿಸಿರಲಿಲ್ಲ. ಆದರೆ ಈಗ ಗ್ರಾಮಾಂತರ ಮತ್ತು ನಗರ ಮಂಡಲದ ನಾಲ್ವರು ಪ್ರಧಾನ ಕಾರ್ಯದರ್ಶಿಗಳನ್ನು ಮಂಡಲದ ಅಧ್ಯಕ್ಷರು ಬದಲಾಯಿಸಿ ನಿಯುಕ್ತಿಗೊಳಿಸಿದ್ದಾರೆ.









