





ಪುತ್ತೂರು:ಮಾದಕ ವಸ್ತು ಸೇವನೆ ಮಾಡಿದ ವಿಚಾರದಲ್ಲಿ ನರಿಮೊಗರು ಮಾಯಂಗಳ ನಿವಾಸಿ ಅರ್ಫಾಝ್ (25ವ.) ಎಂಬಾತನ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್.ಐ.ಸೇಸಮ್ಮ ಅವರು ರೌಂಡ್ಸ್ ಕರ್ತವ್ಯದಲ್ಲಿದ್ದ ಸಂದರ್ಭ ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಬ್ಬರು ವ್ಯಕ್ತಿಗಳು ಅನುಚಿತವಾಗಿ ವರ್ತಿಸುತ್ತಿರುವುದಾಗಿ ಬಂದ ಮಾಹಿತಿ ಪ್ರಕಾರ ಅಲ್ಲಿಗೆ ಹೋದಾಗ ಅವರು ತಪ್ಪಿಸಿಕೊಂಡು ಓಡಿ ಹೋಗಲು ಪ್ರಯತ್ನಿಸಿದಾಗ ನಶೆಯಲ್ಲಿದ್ದವರನ್ನು ಹಿಡಿದು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳ ಮುಂದೆ ಹಾಜರುಪಡಿಸಿದಾಗ ಅರ್ಫಾಝ್ ಎಂಬಾತ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದ್ದರಿಂದ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.












