





ರಾಮಕುಂಜ: ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜು ಮತ್ತು ಪ್ರೌಢಶಾಲೆಯ 2025-26ನೇ ಸಾಲಿನ ವಾರ್ಷಿಕೋತ್ಸವ ನ.28 ಮತ್ತು 29ರಂದು ನಡೆಯಲಿದೆ.
ನ.28ರಂದು ಬೆಳಿಗ್ಗೆ 9.30ರಿಂದ ಪ್ರತಿಭಾ ಪುರಸ್ಕಾರ ನಡೆಯಲಿದ್ದು ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಸುಬ್ರಹ್ಮಣ್ಯ ರಾವ್ ನಗ್ರಿ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಸುಬ್ಬಪ್ಪ ಕೈಕಂಬ, ಮಂಜೇಶ್ವರ ದರ್ಶನ್ ಟೂರ್ ಮತ್ತು ಟ್ರಾವೆಲ್ಸ್‌ನ ರಾಜೇಶ್ ಕೆ.ಜೆ., ಹಿರಿಯ ವಿದ್ಯಾರ್ಥಿಗಳಾದ ಕೊಯಿಲ ವಂಶಿ ಕ್ಲಿನಿಕ್‌ನ ಡಾ.ವಂಶಿ, ಬೆಂಗಳೂರಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ಹೃಷಿಕೇಶ ಶರ್ಮ, ಮಂಗಳೂರಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ನಂದಿತಾ ಎಸ್.ಭಟ್ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12ರಿಂದ ಸಂಜೆ 4.30ರ ತನಕ ಸಾಂಸ್ಕೃತಿಕ ವೈವಿಧ್ಯ ಮತ್ತು ಯಕ್ಷಗಾನ ನಡೆಯಲಿದೆ.


ನ.29ರಂದು ಬೆಳಿಗ್ಗೆ 9.30ರಿಂದ ಸಾಂಸ್ಕೃತಿಕ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದೆ. ಅಪರಾಹ್ನ 1.30ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಾಗಿದ್ದು ಸಾಮಾಜಿಕ ಅರಣ್ಯ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ., ಐಎಚ್‌ಎಂಎ ಕರ್ನಾಟಕ ಇದರ ಜನರಲ್ ಸೆಕ್ರೆಟರಿ ಡಾ.ಪ್ರವೀಣ್‌ಕುಮಾರ್ ವೈ, ಅರಸಿಕೆರೆ ಎಕ್ಸ್‌ಪರ್ಟ್ ಪಿ.ಯು.ಕಾಲೇಜು ಪ್ರಾಚಾರ್ಯ ತೀರ್ಥಪ್ರಸಾದ್ ಎಂ.ಇ., ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶ್ರೀ ರಾಮಕುಂಜೇಶ್ವರ ಪ್ರಥಮ ದರ್ಜೆ ಕಾಲೇಜು ನಿವೃತ್ತ ಪ್ರಾಂಶುಪಾಲ ಗಣರಾಜ ಕುಂಬ್ಳೆ, ಕಡಬ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್‌ಕುಮಾರ್ ಶೆಟ್ಟಿ, ಎಸ್‌ಆರ್‌ಕೆ ಲ್ಯಾಡರ‍್ಸ್‌ನ ಕೇಶವ ಅಮೈ, ರಾಜ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸತೀಶ್ ಭಟ್, ರಾಷ್ಟ್ರೀಯ ಕಬಡ್ಡಿ ತರಬೇತುದಾರ ಮಾಧವ ಬಿ.ಕೆ., ಶಿವರಾಮ ಏನೆಕಲ್ಲು, ಪಿಡಬ್ಲ್ಯುಡಿ ಇಂಜಿನಿಯರ್ ಪ್ರಮೋದ್‌ಕುಮಾರ್, ಬೆಂಗಳೂರು ಕ್ವಾಲಿಟಿ ಅಟೋಮೇಷನ್‌ನ ಚಂದ್ರಶೇಖರ ಸಣ್ಣಾರ ಅವರಿಗೆ ಸನ್ಮಾನ ನಡೆಯಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.











