




ರಾಮಕುಂಜ: ಶತಮಾನೋತ್ಸವ ಸಂಭ್ರಮದಲ್ಲಿರುವ ಹಳೆನೇರಂಕಿ ಸರಕಾರಿ ಉ.ಹಿ.ಪ್ರಾ.ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕ್ರೀಡಾಕೂಟ ನ.30ರಂದು ಶಾಲಾ ಮೈದಾನದಲ್ಲಿ ನಡೆಯಿತು.



ನಿವೃತ್ತ ಎಎಸ್ಐ ಪೂವಣಿ ಗೌಡ ಅವರು ತೆಂಗಿನಕಾಯಿ ಒಡೆದು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ರಮೇಶ್ ರೈ ರಾಮಮಜಲು ಮಾತನಾಡಿ, ದ.5ರಿಂದ 7ರ ತನಕ ಶಾಲಾ ಶತಮಾನೋತ್ಸವ ವಿಜ್ರಂಭಣೆಯಿಂದ ನಡೆಯಲಿದೆ. ಎಲ್ಲರೂ ಈ ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ಹೇಳಿದರು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ವೀರೇಂದ್ರ ಪಾಲೆತಡ್ಡ, ಶಾಲಾ ಶತಮಾನೋತ್ಸವ ಸಮಿತಿ ಉಪಾಧ್ಯಕ್ಷ ಧರ್ಣಪ್ಪ ಗೌಡ ಅಲೆಪ್ಪಾಡಿ, ಭಾಸ್ಕರ ಬರೆಂಬೆಟ್ಟು, ದೈಹಿಕ ಶಿಕ್ಷಣ ಶಿಕ್ಷಕಿ ಮೋಹನಾಂಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಮಹೇಶ್ ಸ್ವಾಗತಿಸಿ, ಮುಖ್ಯಶಿಕ್ಷಕ ಸಾಂತಪ್ಪ ವೈ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಮಣ್ಣ ಗೌಡ ನಿರೂಪಿಸಿದರು. ಬಳಿಕ ವಿವಿಧ ಕ್ರೀಡಾಕೂಟ ನಡೆಯಿತು.















