




ಪುತ್ತೂರು:ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ವತಿಯಿಂದ ನ.28ರಂದು ಬಹರೈನ್ ನ ದಿ ಇಂಡಿಯನ್ ಕ್ಲಬ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮ -2025 ಕಾರ್ಯಕ್ರಮ ನಡೆಯಿತು.



ಪುತ್ತೂರು ಸೇರಿದಂತೆ ವಿವಿಧೆಡೆ ಹೆಚ್.ಪಿ.ಆರ್.ಇನ್ಸ್ಟಿ ಟ್ಯೂಷನ್ ನಡೆಸುತ್ತಿರುವ, ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ, ಉಡುಪಿ ಲಯನ್ಸ್ ಕ್ಲಬ್ನ ಜಿಲ್ಲಾ ಗವರ್ನರ್ , ಶೈಕ್ಷಣಿಕ, ಧಾರ್ಮಿಕ, ಉದ್ಯಮ ಮತ್ತು ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಕಾಂಗ್ರೆಸ್ ಮುಖಂಡ, ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ನಿವಾಸಿ, ಹರಿಪ್ರಸಾದ್ ರೈ ಯವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.






ಭಾರತೀಯ ರಾಯಭಾರಿ ಎಚ್.ಇ. ವಿನೋದ್ ಕೆ. ಜೇಕಬ್, ಬಹರೈನ್ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಅಧ್ಯಕ್ಷ ರಾಜ್ ಕುಮಾರ್, ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ,ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಯೂನಿಯನ್ ಮಂಗಳೂರು ಇದರ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.









