




ಪುತ್ತೂರು: ನರಿಮೊಗರು ಗ್ರಾಮದ ಗಡಿಪಿಲ ನಡುರಸ್ತೆಯಲ್ಲಿ ಗೋವುಗಳನ್ನು ಬಿಟ್ಟು ಹೋದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.



ನರಿಮೊಗರು ಗ್ರಾಮದ ಗಡಿಪಿಲದಲ್ಲಿ ನ.29 ರಂದು ಬೆಳಗ್ಗೆ 5 ಅಪರಿಚಿತ ಗೋವುಗಳು ನಡುರಸ್ತೆಯಲ್ಲಿರುವುದು ಬೆಳಕಿಗೆ ಬಂದಿತ್ತು. ಈ ಕುರಿತು ಪಾಣಾಜೆ ನಿವಾಸಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಪ್ರೇಮ್ರಾಜ್ ಎಂಬವರ ದೂರಿನಂತೆ ಯಾರೋ ಕಳ್ಳರು ವಾಹನವೊಂದರಲ್ಲಿ ಗೋವುಗಳನ್ನು ಸಾಗಿಸುವ ವೇಳೆಯಲ್ಲಿ, ಸದ್ರಿ ವಾಹನ ರಸ್ತೆಯಲ್ಲಿ ಕೆಟ್ಟುಹೋಗಿರುವುದರಿಂದ, ವಾಹನದಲ್ಲಿದ್ದ ಗೋವುಗಳನ್ನು ನಡು ರಸ್ತೆಯಲ್ಲೇ ಬಿಟ್ಟು ಹೋಗಿರುವ ಶಂಕೆಯ ಮೇರೆಗೆ ಪೊಲೀಸರು ತನಿಖೆ ನಡೆಸಿದ್ದರು.





ಘಟನೆಗೆಯಲ್ಲಿ ಆರೋಪಿಗಳಾದ ಉಳ್ಳಾಲ ಸಜಿಪನಡು ನಿವಾಸಿಗಳಾದ ಆಶಿಕ್ ಪಾಷಾ (26ವ) ಹಾಗೂ ಅಬ್ದುಲ್ ಲತೀಫ್ (25ವ) ಎಂಬವರ ಕೆಎ 52 4889 ನೋಂದಣಿಯ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ 4 ಕರುಗಳನ್ನು ಹಾಗೂ ಒಂದು ದನವನ್ನು ಸಾಗಿಸುವ ವೇಳೆ ವಾಹನ ದುರಸ್ತಿಗೀಡಾದ್ದರಿಂದ, ಆರೋಪಿಗಳು ಸದ್ರಿ ಜಾನುವಾರುಗಳನ್ನು ರಸ್ತೆಯಲ್ಲಿ ಬಿಟ್ಟು ವಾಹನದೊಂದಿಗೆ ತೆರಳಿರುವುದು ತಿಳಿದುಬಂದಿರುತ್ತದೆ. ಸದ್ರಿ ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಇನ್ನೋವಾ ಕಾರನ್ನು ವಶಕ್ಕೆ ಪಡೆದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.







