ಡಿ.8ಕ್ಕೆ ಬೆಂಗಳೂರಿನಲ್ಲಿ 72ನೇ ಸೀನಿಯರ್ ಪುರುಷರ, ಮಹಿಳೆಯರ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್- ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ

0

ಪುತ್ತೂರು: ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ ಬೆಂಗಳೂರಿನಲ್ಲಿ ನಡೆಯಲಿದೆ. ಅಕ್ಟೋಬರ್ 18ರಂದು ಭಾರತೀಯ ವಾಲಿಬಾಲ್ ಫೆಡರೇಶನ್ (ವಿಎಫ್‌ಐ) ಕಳುಹಿಸಿರುವ ಸುತ್ತೋಲೆಯ ಪ್ರಕಾರ, ಪುರುಷರು ಮತ್ತು ಮಹಿಳೆಯರ 72ನೇ ಸೀನಿಯರ್ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ ಉತ್ತರ ಪ್ರದೇಶದ ವಾರಣಾಸಿಯಲ್ಲಿ 2026ರ ಜ.4 ರಿಂದ 11ರ ತನಕ ನಡೆಯಲಿದೆ.


ಚಾಂಪಿಯನ್‌ಶಿಪ್‌ಗೆ ಸಿದ್ಧತೆಯಾಗಿ, ಕರ್ನಾಟಕ ವಾಲಿಬಾಲ್ ಅಸೋಸಿಯೇಷನ್ (ಕೆವಿಎ) ಕರ್ನಾಟಕ ರಾಜ್ಯ ಪುರುಷ ಮತ್ತು ಮಹಿಳಾ ತಂಡಗಳನ್ನು ರಚಿಸಲು ಆಯ್ಕೆ ಪ್ರಕ್ರಿಯೆ ಡಿ.8ರಂದು ಬೆಳಗ್ಗೆ 9:00 ಗಂಟೆಗೆ ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್.ಎ.ಐ), ಎನ್‌ಎಸ್‌ಎಸ್‌ಸಿ ಬೆಂಗಳೂರಿನಲ್ಲಿ ನಡೆಯಲಿದೆ.


ಅರ್ಹತೆ: ಕರ್ನಾಟಕದ ವಾಲಿಬಾಲ್ ಆಟಗಾರರು ಮಾತ್ರ ಭಾಗವಹಿಸಲು ಅವಕಾಶವಿದೆ. ಎಲ್ಲಾ ಅರ್ಹ ಆಟಗಾರರು ಸಮಯಕ್ಕೆ ಸರಿಯಾಗಿ ಕರ್ನಾಟಕ ರಾಜ್ಯ ವಾಲಿಬಾಲ್ ಎಸೋಸಿಯೇಷನ್ ಇದರ ಅಧ್ಯಕ್ಷರಾದ ಹರ್ಷ ಮತ್ತು ಪ್ರಧಾನ ಕಾರ್ಯದರ್ಶಿ ಎಲ್.ಪಿ. ಆಂಥೋನಿ ಜೋಸೆಫ್ ಅವರಿಗೆ ವರದಿ ಸಲ್ಲಿಸಬೇಕಾಗುತ್ತದೆ. ಆಯ್ಕೆಯಾದ ಪುರುಷರ ಮತ್ತು ಮಹಿಳೆಯರ ಆಟಗಾರರಿಗೆ ಉತ್ತಮ ತರಬೇತುದಾರರಿಂದ ಊಟ ಮತ್ತು ವಸತಿಯೊಂದಿಗೆ 20 ದಿವಸದ ತರಬೇತಿ ಶಿಬಿರವನ್ನು ನೀಡಲಾಗುವುದೆಂದು ಕರ್ನಾಟಕ ರಾಜ್ಯ ವಾಲಿಬಾಲ್ ಅಸೋಸಿಯೇಷನ್ ಇದರ ಕಾರ್ಯಕಾರಿ ಸಮಿತಿ ಸದಸ್ಯ ಸಾಲ್ಮರ ಶರೀಫ್ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here