




ಪುತ್ತೂರು: ಮಾಯ್ ದೇ ದೇವುಸ್ ಚರ್ಚ್ ವಠಾರದಲ್ಲಿರುವ ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ಮಾಯ್ ದೆ ದೇವುಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಡಿ.3ರಂದು ನಡೆಯಲಿದೆ. ಬೆಳಿಗ್ಗೆ 9.30ರಿಂದ ನಡೆಯುವ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಸಿ. ಹಾಗೂ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ|ಅಶೋಕ್ ರಾಯನ್ ಕ್ರಾಸ್ತಾ ಭಾಗವಹಿಸಲಿದ್ದಾರೆ. ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ.ಲಾರೆನ್ಸ್ ಮಸ್ಕರೇನಸ್ ಅಧ್ಯಕ್ಷತೆ ವಹಿಸಲಿದ್ದಾರೆ.



ಅಪರಾಹ್ನ 3ರಿಂದ ನಡೆಯುವ ಸಭಾಕಾರ್ಯಕ್ರಮದಲ್ಲಿ ಮಂಗಳೂರು ಕೆಥೋಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ವಂ|ಡಾ|ಪ್ರವೀಣ್ ಲಿಯೋ ಲಸ್ರಾದೊ ಅಧ್ಯಕ್ಷತೆ ವಹಿಸಲಿದ್ದಾರೆ. ಗೌರವ ಉಪಸ್ಥಿತರಾಗಿ ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ.ಲಾರೆನ್ಸ್ ಮಸ್ಕರೇನಸ್, ಮಯ್ ದೆ ದೇವುಸ್ ಚರ್ಚ್‌ನ ಸಹಾಯಕ ಧರ್ಮಗುರು ವಂ|ಮರ್ವಿನ್ ಪ್ರವೀಣ್ ಲೋಬೋ, ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಜೆರಾಲ್ಡ್ ಡಿಕೊಸ್ತ ಭಾಗವಹಿಸಲಿದ್ದಾರೆ. ಬಳಿಕ ವಿದ್ಯಾರ್ಥಿಗಳಿಂದ “ಸೃಜನ ಸಂಭ್ರಮ” ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.













