




ರಾಮಕುಂಜ: ಇಲ್ಲಿನ ಬಾರಿಂಜ ಕುಟುಂಬಸ್ಥರ ವತಿಯಿಂದ ಸೇವಾರ್ಥವಾಗಿ ಶ್ರೀ ರಾಮಕುಂಜೇಶ್ವರ ದೇವಸ್ಥಾನದ ವಠಾರದಲ್ಲಿ ದ.10ರಂದು ಸಂಜೆ 6 ಗಂಟೆಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ನಡೆಯಲಿರುವ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟದ ಆಮಂತ್ರಣ ಪತ್ರಿಕೆಯನ್ನು ದ.3ರಂದು ಬೆಳಿಗ್ಗೆ ಶ್ರೀ ರಾಮಕುಂಜೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು.




ಶ್ರೀ ರಾಮಕುಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗುರುಪ್ರಸಾದ ರಾಮಕುಂಜ ಹಾಗೂ ಶ್ರೀಕಾಂತ ಕಲ್ಲೂರಾಯ ಬಾಜಳ್ಳಿ ಅವರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ದೇವಸ್ಥಾನದ ಪವಿತ್ರಪಾಣಿ ನರಹರಿ ಉಪಾಧ್ಯಾಯ, ವ್ಯವಸ್ಥಾಪನಾ ಸಮಿತಿ ಸದಸ್ಯರು, ವಿವಿಧ ಸಮಿತಿಗಳ ಪದಾಧಿಕಾರಿಗಳು, ಬಾರಿಂಜ ಕುಟುಂಬಸ್ಥರು, ಗ್ರಾಮಸ್ಥರು ಉಪಸ್ಥಿತರಿದ್ದರು.













