







ಪುತ್ತೂರು: ನಿವೃತ್ತ ಪದವೀಧರ ಶಿಕ್ಷಕ, ಶಿಕ್ಷಣದಲ್ಲಿ ಹಿರಿಮೆಗೆ ರಾಜ್ಯ ಪುರಸ್ಕಾರ ಸೇರಿದಂತೆ ಹಲವು ಪ್ರಶಸ್ತಿ ಪುರಸ್ಕೃತ, ಸುದ್ದಿ ಬಿಡುಗಡೆಯ ಪ್ರತಿಭಾರಂಗ ಅಂಕಣಕಾರ,ದ.ಕ.ಜೇನುವ್ಯವಸಾಯಗಾರರ ಸಹಕಾರಿ ಸಂಘ ಪ್ರಕಟಿತ ಮಧುಪ್ರಪಂಚ ಪತ್ರಿಕಾ ಪ್ರಧಾನ ಸಂಪಾದಕ ನಾರಾಯಣ ರೈ ಕುಕ್ಕುವಳ್ಳಿ ಯವರು 2025ರ ರಾಜ್ಯ ಪತ್ರಕರ್ತರ ಸಂಘದ ಮಂಗಳ ವರ್ಗೀಸ್ ಸ್ಮಾರಕ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.


ಡಿ.9ರಂದು ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಪ್ರದಾನ ಮಾಡಲಾಗುವುದೆಂದು ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ, ವಾರ್ತಾಭಾರತಿಯ ಹಿರಿಯ ಪತ್ರಕರ್ತ ಪುಷ್ಪರಾಜ್ ಬಿ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂಕಣ ಲೇಖನ ಬರಹಕ್ಕಾಗಿ ಈ ಪ್ರಶಸ್ತಿ ಲಭಿಸಿದೆ.













