




ನಿಡ್ಪಳ್ಳಿ: ಪಾಣಾಜೆ ಸುಬೋಧ ಪ್ರೌಢಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಡಿ.6 ರಂದು ನಡೆಯಲಿದೆ.



ಬೆಳಿಗ್ಗೆ ಗಂಟೆ 9.30ಕ್ಕೆ ಧ್ವಜವಂದನೆ, ಗಂಟೆ 10ಕ್ಕೆ ಛದ್ಮವೇಷ ಸ್ಪರ್ಧೆ ನಡೆಯಲಿದೆ. ಸಂಜೆ ಗಂಟೆ 5.30ಕ್ಕೆ ಸಭಾ ಕಾರ್ಯಕ್ರಮ ಪಾಣಾಜೆ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಉಪೇಂದ್ರ ಬಲ್ಯಾಯ ದೇವಸ್ಯ ಅಧ್ಯಕ್ಷತೆ ವಹಿಸಲಿರುವರು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಪುತ್ತೂರು ಎಸ್.ಆರ್.ಕೆ ಲ್ಯಾಡರ್ ಮಾಲಕ ಕೇಶವ ಅಮೈ, ಶಾಲೆಯ ಪ್ರಥಮ ಬ್ಯಾಚ್ ನ ಹಿರಿಯ ವಿದ್ಯಾರ್ಥಿ ಅಬ್ದುಲ್ ರೆಹಮಾನ್, ಲೋಕೇಶ್ ಬಲ್ಯಾಯ ದೊಡ್ಡಡ್ಕ ಜ್ಯೋತಿಷ್ಯರು ಆರ್ಲಪದವು ಇವರು ಮುಖ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ರಾತ್ರಿ ಗಂಟೆ 7.30 ರಿಂದ ಮನರಂಜನಾ ಕಾರ್ಯಕ್ರಮ ನಡೆಯಲಿದೆ ಎಂದು ಶಾಲಾ ಸಂಚಾಲಕ ಮಹಾಬಲೇಶ್ವರ ಭಟ್ ಗಿಳಿಯಾಲು ತಿಳಿಸಿದ್ದಾರೆ.













