




ಕಾಣಿಯೂರು: ಜಲ ಜೀವನ್ ಮಿಷನ್ ಮತ್ತು ಸ್ವಚ್ಛ ಭಾರತ ಮಿಷನ್ ಯೋಜನೆಗಳಡಿಯಲ್ಲಿ ಮಾಹಿತಿ, ಶಿಕ್ಷಣ ಹಾಗೂ ಸಂವಹನ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಲುವಾಗಿ ಶಾಲೆಯ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಬೊಬ್ಬೆಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದು, ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.



ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಸುನೀತಾ ಗಣೇಶ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ, ಮುಖ್ಯಶಿಕ್ಷಕಿ ಶಶಿಕಲಾ,ಹಾಗೂ ಎಸ್ ಡಿ ಎಂ ಸಿ ಸದಸ್ಯರು, ಸಹ ಶಿಕ್ಷಕರು ಉಪಸ್ಥಿತರಿದ್ದರು.















