




ಸವಣೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಮೊಗರಿನಲ್ಲಿ ನಡೆದ ವಲಯ ಮಟ್ಟದ ಪ್ರತಿಭಾಕಾರಂಜಿಯಲ್ಲಿ ವಿದ್ಯಾರಶ್ಮಿ ವಿದ್ಯಾಲಯದ 9ನೇ ತರಗತಿಯ ಶಂತನುಕೃಷ್ಣ ಕೆ ಎ.ಕನ್ನಡ ಪ್ರಬಂಧದಲ್ಲಿ ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಇವರನ್ನು ಸಂಚಾಲಕ ಸವಣೂರು ಸೀತಾರಾಮ ರೈ ಕೆ, ಆಡಳಿತ ಅಧಿಕಾರಿ ಅಡ್ವಕೇಟ್ ಅಶ್ವಿನ್ ಶೆಟ್ಟಿ, ಪ್ರಾಂಶುಪಾಲರಾದ ಶಶಿಕಲಾ ಎಸ್ ಆಳ್ವ ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದರು.












