




ಪುತ್ತೂರು: ವೀರಮಂಗಲ ಆನಾಜೆಯ ಶ್ರೀ ಮಹಾವಿಷ್ಣು ಸೇವಾ ಟ್ರಸ್ಟ್‌ನ ರಜತ ಸಂಭ್ರಮದಲ್ಲಿ ಸಾರ್ವಜನಿಕ ಶ್ರೀ ಮಹಾಲಿಂಗೇಶ್ವರ ಕಟ್ಟೆ ಸಮಿತಿಯ ಸಹಕಾರೊಂದಿಗೆ ರಜತ ಸಂಭ್ರಮ ಮತ್ತು ಧನ್ವಂತರಿ ಯಾಗ, ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯು ಡಿ.13ರಂದು ವೀರಮಂಗಲ ಆನಾಜೆಯ ಸಾರ್ವಜನಿಕ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯಲ್ಲಿ ನಡೆಯಲಿದೆ ಎಂದು ಶ್ರೀ ಮಹಾವಿಷ್ಣು ಸೇವಾ ಪ್ರತಿಷ್ಠಾನದ ಅಧ್ಯಕ್ಷ ಹರೀಶ್ ಆಚಾರ್ಯ ಆನಾಜೆ ಮತ್ತು ನಿಕಟಪೂರ್ವ ಅಧ್ಯಕ್ಷ ವಿದ್ವಾನ್ ಗೋಪಾಲಕೃಷ್ಣ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.




ಬೆಳಿಗ್ಗೆ ಗಂಟೆ 9ಕ್ಕೆ ಧನ್ವಂತರಿ ಯಾಗ ನಡೆಯಲಿದೆ. ಈ ಸಂದರ್ಭ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅರ್ಚಕ ರಾಧಾಕೃಷ್ಣ ಶಗ್ರಿತ್ತಾಯ ಅವರ ನೇತೃತ್ವದಲ್ಲಿ ವೇ ಮೂ ಶ್ರೀವತ್ಸ ಕೆದಿಲಾಯ ಶಿಬರ ಅವರ ಕಥಾ ಪ್ರವಚನ ನಡೆಯಲಿದೆ. ಸಂಜೆ ಗಂಟೆ 5.30ಕ್ಕೆ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ನಡೆಯಲಿದೆ. ಬೆಳಿಗ್ಗೆ ಗಂಟೆ 11ಕ್ಕೆ ಧಾರ್ಮಿಕ ಸಭೆ ನಡೆಯಲಿದೆ. ಶ್ರೀ ಕ್ಷೇತ್ರ ಒಡಿಯೂರು ಗುರುದೇವದತ್ತ ಸಂಸ್ಥಾನಮ್‌ನ ಸಾಧ್ವಿ ಶ್ರೀ ಮಾತಾನಂದಮಯಿ ಅವರು ಅಶೀರ್ವಚನ ನೀಡಲಿದ್ದಾರೆ. ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶಿವರಾಮ ಭಟ್ ಬಾವ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕಳ ಮಲಾರಬೀಡು, ನರಿಮೊಗರು ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ನವೀನ್ ಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವೀರಮಂಗಲ ಮತ್ತು ಭಕ್ತಕೋಡಿ ಶ್ರೀಕೃಷ್ಣ ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ ಭರತನಾಟ್ಯ ಮತ್ತು ಶ್ರೀ ಶನೈಶ್ಚರ ಚರಿತ್ರೆಯ ನೃತ್ಯ ರೂಪಕ ನಡೆಯಲಿದೆ ಎಂದವರು ಹೇಳಿದರು.





ರಾತ್ರಿ ಭಕ್ತಿ ರಸಮಂಜರಿ, ನಾಟಕ ಪ್ರದರ್ಶನ:
ರಾತ್ರಿ ನಡೆಯುವ ಧಾರ್ಮಿಕ ಸಭೆಯಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ನವಾಕ್ಷರಿ ಬಾರ್ಕೂರು ಎನ್. ಆರ್ ದಾಮೋದರ ಅವರು ಧಾರ್ಮಿಕ ಭಾಷಣ ಮಾಡಲಿದ್ದಾರೆ. ವಿಧಾಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಕೆಮ್ಮಿಂಜೆ ನಾಗೇಶ್ ತಂತ್ರಿ, ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಸಮುದಾಯ ಆರೋಗ್ಯ ತಜ್ಞೆ ಡಾ. ಅನನ್ಯ ಲಕ್ಷ್ಮೀ ಸಂದೀಪ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಾತ್ರಿ ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 9ರಿಂದ ವಿಜಯಶ್ರೀ ಮುಳಿಯ ಮತ್ತು ಬಳಗದವರಿಂದ ಭಕ್ತಿ ರಸಮಂಜರಿ, ಮಂಜೇಶ್ವರ ಶಾರದಾ ಆರ್ಟ್ಸ್ ಕಲಾವಿದರಿಂದ ದಾನೆ ದೇವೆರೆ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ವಿದ್ವಾನ್ ಗೋಪಾಲಕೃಷ್ಣ ಅವರು ತಿಳಿಸಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಶ್ರೀ ಮಹಾವಿಷ್ಣು ಸೇವಾ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ವಸಂತ ಗೌಡ ಸೇರಾಜೆ, ಪ್ರಧಾನ ಕಾರ್ಯದರ್ಶಿ ವಿಜಯ ಆನಾಜೆ, ಉಪಾಧ್ಯಕ್ಷ ಉಮೇಶ್ ಕೋಡಿಬೈಲು ಉಪಸ್ಥಿತರಿದ್ದರು.








