ಡಿ.13: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ಹೊಸ ಕಾರ್ಮಿಕ ಸಂಹಿತೆಗಳು, ಒಂದು ವಿಮರ್ಶಾತ್ಮಕ ದೃಷ್ಟಿಕೋನ’ ಎಂಬ ವಿಷಯದ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

0

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಭಾರತೀಯ ಮಜುದೂರ್ ಸಂಘದ ಸಹಯೋಗದಲ್ಲಿ ‘ಹೊಸ ಕಾರ್ಮಿಕ ಸಂಹಿತೆಗಳು, ಒಂದು ವಿಮರ್ಶಾತ್ಮಕ ದೃಷ್ಟಿಕೋನ’ ಎಂಬ ವಿಷಯದ ಕುರಿತು ವಿಶೇಷ ರಾಷ್ಟ್ರೀಯ ವಿಚಾರ ಸಂಕಿರಣ ಡಿ.13ರಂದು ಶನಿವಾರ ನಡೆಯಲಿದೆ.

ಈ ಕಾರ್ಯಕ್ರಮವನ್ನು ಈ ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರ ನಿರ್ದೇಶಕರು ಹಾಗೂ ಹಾರ್ಧಿಕ್ ಹರ್ಬಲ್ಸ್ ನ ಸಿ.ಇ.ಒ. ಆಗಿರುವ ಮುರಲೀಧರ ಕೆ. ಉದ್ಘಾಟಿಸಲಿದ್ದು, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರ ಕಾರ್ಯದರ್ಶಿಯಾಗಿರುವ ಡಾ. ಕೆ. ಎಂ. ಕೃಷ್ಣ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ನ ಪ್ರೋ. ಬಾಬು ಮ್ಯಾತ್ಯು, ಉಪ ಕಾರ್ಮಿಕ ಆಯುಕ್ತರಾದ ಕೆ. ಜಿ. ಜಾನ್ಸನ್, ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯವಾದಿ ಪ್ರಶಾಂತ್ ಬಿ.ಕೆ. ಆಗಮಿಸಿ ವಿಚಾರ ಮಂಡಿಸಲಿದ್ದಾರೆ. ವೇದಿಕೆಯಲ್ಲಿ ಕಾನೂನು ಮಹಾವಿದ್ಯಾಲಯದ ಸಂಚಾಲಕರಾದ ವಿಜಯನಾರಾಯಣ ಕೆ. ಎಂ., ಕಾನೂನು ಅದ್ಯಯನ ವಿಭಾಗದ ನಿರ್ದೇಶಕರಾಗಿರುವ ಡಾ. ಬಿ. ಕೆ. ರವೀಂದ್ರ ಪ್ರಾಂಶುಪಾಲೆ ಅಕ್ಷತಾ ಎ. ಪಿ. ಉಪಸ್ಥಿತರಿರಲಿದ್ದಾರೆ.

LEAVE A REPLY

Please enter your comment!
Please enter your name here