




ಪುತ್ತೂರು: ಬ್ಯಾಂಕ್ ಆಫ್ ಬರೋಡ ಮತ್ತು ಕೆನರಾ ಬ್ಯಾಂಕ್ ಆಶ್ರಯದಲ್ಲಿ ಪುತ್ತೂರು ಮತ್ತು ಕಡಬ ತಾಲೂಕಿನ ಸ್ವ-ಸಹಾಯ ಸಂಘಗಳಿಗೆ ಬ್ಯಾಂಕ್‌ಗಳ ಸಾಲ ಸಂಪರ್ಕ ಅಭಿಯಾನ ಕಾರ್ಯಕ್ರಮ ಡಿ.11ರಂದು ಪುತ್ತೂರು ತಾ.ಪಂ.ಸಭಾಂಗಣದಲ್ಲಿ ನಡೆಯಿತು.




ಬ್ಯಾಂಕ್ ಆಫ್ ಬರೋಡ ಇದರ ಪುತ್ತೂರು ಪ್ರಾದೇಶಿಕ ಕಚೇರಿಯ ಡಯಾನ, ಬ್ಯಾಂಕ್ ಆಫ್ ಬರೋಡ ಅಗ್ರಿಕಲ್ಚರ್ ಆಫೀಸರ್ ಅಜಯ್, ಕೆನರಾ ಬ್ಯಾಂಕ್ ಪುತ್ತೂರು ಪ್ರಾದೇಶಿಕ ಕಚೇರಿಯ ಅಗ್ರಿಕಲ್ಚರ್ ಆಫೀಸರ್ ಅರುಣ್, ಮ್ಯಾನೇಜರ್ ಶ್ರೀಧರ್, ತಾಲೂಕು ಅಭಿಯಾನ ನಿರ್ವಹಣಾ ಘಟಕದ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಜಗತ್ ಕೆ, ಪುತ್ತೂರು ತಾಲೂಕಿನ ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಸಂಪನ್ಮೂಲ ವ್ಯಕ್ತಿ ಗೀತಾ ವಿಜಯ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.





ಕೆನರಾ ಮತ್ತು ಬ್ಯಾಂಕ್ ಆಫ್ ಬರೋಡ ಸಹಯೋಗದಲ್ಲಿ ಪುತ್ತೂರು ಮತ್ತು ಕಡಬ ತಾಲೂಕಿನ ಒಟ್ಟು 21 ಸಂಘಗಳಿಗೆ 1.27 ಕೋಟಿ ರೂ. ಬ್ಯಾಂಕ್ ಸಾಲ ವಿತರಿಸಲಾಯಿತು. ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಸಂಪನ್ಮೂಲ ವ್ಯಕ್ತಿ ಗೀತಾ ವಿಜಯ್ ಸ್ವಾಗತಿಸಿ, ಸ್ಥಳೀಯ ಸಂಪನ್ಮೂಲ ವ್ಯಕ್ತಿ ಶಕುಂತಲಾ ವಂದಿಸಿದರು. ಕೃಷಿಯೇತರ ಚಟುವಟಿಕೆ ತಾಲೂಕು ಅಭಿಯಾನ ನಿರ್ವಹಣಾ ಘಟಕದ ತಾಲೂಕು ವ್ಯವಸ್ಥಾಪಕಿ ನಳಿನಾಕ್ಷಿ ನಿರೂಪಿಸಿದರು.





