




ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಇವರ ಆಶ್ರಯದಲ್ಲಿ ಹಾರಾಡಿ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪುತ್ತೂರು ಮತ್ತು ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ’ಕಲನ 2025’ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಶ್ರೀ ರಾಮಕುಂಜೆಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ತೃತೀಯ ಸಮಗ್ರ ಪ್ರಶಸ್ತಿ ಲಭಿಸಿದೆ.




ಶಾಲೆಯ ವಿದ್ಯಾರ್ಥಿಗಳಾದ ಪ್ರಣಮ್ಯ ಹೆಚ್.ಕೆ.-ಸಂಸ್ಕೃತ ಭಾಷಣ ಪ್ರಥಮ ಮತ್ತು ಧಾರ್ಮಿಕ ಪಠಣ ದ್ವಿತೀಯ, ಅನುಶ್ರೀ- ರಂಗೋಲಿಯಲ್ಲಿ ಪ್ರಥಮ, ಸಿಂಚನ ಎಸ್.-ಕನ್ನಡ ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಸ್ತುತ ವರ್ಷದ ಸಾಂಸ್ಕೃತಿಕ ತಂಡದ ನೇತೃತ್ವವನ್ನು ಶಾಲಾ ಇಂಗ್ಲಿಷ್ ಭಾಷಾ ಶಿಕ್ಷಕರಾದ ಪ್ರವೀಣ್ ಕುಮಾರ್ ವಹಿಸಿದ್ದರು. ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯಗುರು ಸತೀಶ್ ಭಟ್ ಇವರ ಮಾರ್ಗದರ್ಶನದಲ್ಲಿ ಶಾಲಾ ಶಿಕ್ಷಕರು ತರಬೇತಿ ನೀಡಿದ್ದರು.












