




ಪುತ್ತೂರು: ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯತ್ ತುಮಕೂರು, ಉಪನಿದೇಶಕರ ಕಚೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಧುಗಿರಿ ಇವರ ಸಂಯುಕ್ತ ಆಶ್ರಯದಲ್ಲಿ ಮಧುಗಿರಿ ತಾಲೂಕು ಕ್ರೀಡಾಂಗಣದಲ್ಲಿ ನಡೆದ 2025-26ನೇ ಸಾಲಿನ 14ರ ವಯೋಮಾನದ ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ್ದ ದರ್ಬೆ ಪಾಂಗಳಾಯಿ ಬೆಥನಿ ಆಂಗ್ಲ ಮಾಧ್ಯಮ ಶಾಲಾ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದೆ.



ಶಾಲಾ ತಂಡದಲ್ಲಿ ವಿದ್ಯಾರ್ಥಿನಿಯರಾದ ಆದ್ಯ ಕೆ, ಶಾನ್ವಿ ಪ್ರಿಷ್ಮಾ ಮೊಂತೇರೊ, ಝುಲ್ಫಾ, ಸಮನ್ವಿ ಕೆ, ಝೆರುಷ ಡಿ ಅಲ್ಮೇಡಾ, ಶ್ರುತ, ವಿನ್ಯಾ ಸಮನಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು. ಶಾಲಾ ಪ್ರಾಂಶುಪಾಲರಾದ ಭಗಿನಿ ಅನಿತಾ ಟ್ರೆಸ್ಸಿಯವರ ಪ್ರೋತ್ಸಾಹ ಮತ್ತು ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಕರಾದ ನಿರಂಜನ್ ಹಾಗೂ ಅಕ್ಷಯ್ ಅವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು. ವಿದ್ಯಾರ್ಥಿನಿಯರ ಶ್ರದ್ಧೆ ಮತ್ತು ತರಬೇತಿದಾರರ ಸಮರ್ಪಣಾ ಭಾವವು ಈ ವಿಶಿಷ್ಟ ಸಾಧನೆಗೆ ಕಾರಣವಾಗಿದೆ.















