




ಪುತ್ತೂರು: ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ವಿತರಿಸುವ ಕಾರ್ಯಕ್ರಮವು ಡಿ.21ರಂದು ಪುತ್ತೂರು ಪತ್ರಿಕಾ ಭವನದಲ್ಲಿ ನಡೆಯಲಿದೆ.



ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ, ರೋಟರಿ ಕ್ಲಬ್ ಪುತ್ತೂರು ಯುವ ಇವರ ಸಂಯುಕ್ತ ಆಶ್ರಯದಲ್ಲಿ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ. ಶ್ರವಣದ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಹೆಸರಾಂತ, ಅನುಭವಿ ವೈದ್ಯರು ಭಾಗವಹಿಸಲಿದ್ದಾರೆ.





ಈಶ್ವರ ಮಲ್ಪೆಯವರು ಶ್ರವಣ ಯಂತ್ರಕ್ಕೆ ಆಗುವ ವೆಚ್ಚದ ಶೇ.40 ಮೊತ್ತವನ್ನು ಭರಿಸುತ್ತಾರೆ. ತಪಾಸಣೆಗೆ ನೋಂದಣಿ ಕಡ್ಡಾಯವಾಗಿರುವುದರಿಂದ ಆಸಕ್ತರು ಮೊ: 9901415299, 8951804399, 9611202515 ನಂಬರ್ಗೆ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳುವಂತೆ ಸಂಘಟಕರು ತಿಳಿಸಿದ್ದಾರೆ.










